Bengaluru | ವರದಕ್ಷಿಣೆ ಕಿರುಕುಳ ಆರೋಪ: ಪಿಎಸ್ಸೈ ಬಂಧನ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ವರದಕ್ಷಿಣೆ ಕಿರುಕುಳ ನೀಡಿ, ಹಲ್ಲೆ ಮಾಡಲು ಯತ್ನಿಸಿದ್ದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಂಟ್ರೋಲ್ ರೂಮ್ ವಿಭಾಗದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಎಸ್.ಬೈರಪ್ಪ ಬಂಧಿತ ಆರೋಪಿ ಪಿಎಸ್ಸೈ ಎಂದು ಗುರುತಿಸಲಾಗಿದೆ. ತನ್ನ ಗಂಡ ಕೆ.ಎಸ್.ಬೈರಪ್ಪ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದಾನೆ. ಅಲ್ಲದೆ, ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಹಲ್ಲೆಗೊಳಗಾದ ಪತ್ನಿ ರೇವತಿ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆ.ಎಸ್.ಬೈರಪ್ಪ ಅವರನ್ನು ಬಂಧಿಸಿದ್ದಾರೆ.
ಜು.12ರಂದು ಮನೆಯಲ್ಲಿ ಗಲಾಟೆ ನಡೆದಿದೆ. ತಾನು ಪಿಎಸ್ಐ ಆಗಿದ್ದು, ಮದುವೆ ವೇಳೆ ವರದಕ್ಷಿಣೆ ಕೊಟ್ಟಿಲ್ಲ. ಹೀಗಾಗಿ ತವರು ಮನೆಯಿಂದ 50 ಲಕ್ಷ ರೂ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದಕ್ಕೆ ನನ್ನ ತಂದೆಗೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪತ್ನಿ ರೇವತಿ ಆರೋಪಿಸಿದ್ದಾರೆ.




