Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ವಿಧಾನ ಪರಿಷತ್ ಸ್ಥಾನ...

Bengaluru | ವಿಧಾನ ಪರಿಷತ್ ಸ್ಥಾನ ಕೊಡಿಸುವುದಾಗಿ 1.5 ಕೋ.ರೂ. ವಂಚನೆ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ29 July 2026 11:47 PM IST
share
Bengaluru | ವಿಧಾನ ಪರಿಷತ್ ಸ್ಥಾನ ಕೊಡಿಸುವುದಾಗಿ 1.5 ಕೋ.ರೂ. ವಂಚನೆ; ಪ್ರಕರಣ ದಾಖಲು

ಬೆಂಗಳೂರು : ‘ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ’ ಎಂದು ಹೇಳಿಕೊಂಡು, ‘ವಿಧಾನ ಪರಿಷತ್ ಸದಸ್ಯ ಸ್ಥಾನ’ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ಮಹಿಳೆಯೊಬ್ಬರಿಗೆ 1.5 ಕೋಟಿ ರೂ. ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಆರೋಪಿ ಯರ್ರಿಸ್ವಾಮಿ ಹಾಗೂ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿವಿಧ ಸ್ಥಳಗಳಲ್ಲಿ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿ ಯರ್ರಿಸ್ವಾಮಿ ತಾನು ಕಾಂಗ್ರೆಸ್ ಹಿರಿಯ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡಿದ್ದ. ಆಡಳಿತಾರೂಢ ಪ್ರಭಾವಿ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೊಗಳನ್ನು ತೋರಿಸಿ ಮಂಗಳೂರಿನ ಮಹಿಳೆಯನ್ನು ನಂಬಿಸಿದ್ದ. ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿದ್ದ ಈತ, ಅದಕ್ಕಾಗಿ 5 ಕೋಟಿ ರೂ.ಗೆ ವ್ಯವಹಾರ ನಡೆಸಿದ್ದ ಎನ್ನಲಾಗಿದೆ.

ಆರೋಪಿಯ ಮಾತುಗಳನ್ನು ಸತ್ಯವೆಂದು ನಂಬಿದ ಮಹಿಳೆ, 2024ರ ಆಗಸ್ಟ್‌ನಿಂದ 2025ರ ಜನವರಿಯ ಅವಧಿಯಲ್ಲಿ ಹಂತ-ಹಂತವಾಗಿ ಒಟ್ಟು 1.50 ಕೋಟಿ ರೂ. ನಗದನ್ನು ತಲುಪಿಸಿದ್ದಾರೆ. ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಯರ್ರಿಸ್ವಾಮಿಯ ಸೂಚನೆಯಂತೆ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ವಂಚನೆಯಷ್ಟೇ ಅಲ್ಲದೆ, ಎಐಸಿಸಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಸುವುದಾಗಿ ನಂಬಿಸಿ ಮಹಿಳೆಯನ್ನು ದಿಲ್ಲಿಗೆ ಕರೆದೊಯ್ದಿದ್ದ ಯರ್ರಿಸ್ವಾಮಿ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X