Bengaluru | ಮಹಿಳೆಯ ಜೊತೆ ಅಸಭ್ಯ ವರ್ತನೆ ಆರೋಪ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್ ಟೇಬಲ್ ಮೇಲೆ ಮಹಿಳೆಯ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಹಲ್ಲೆಗೊಳಗಾದವರು.
ಜಾಲಹಳ್ಳಿಗೆ ಬಸ್ನಲ್ಲಿ ಹೋಗುವಾಗ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ.
ತಾನು ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹಿಳೆ ಹಾಗೂ ಹೆಡ್ ಕಾನ್ಸ್ ಟೇಬಲ್ ಇಬ್ಬರೂ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಿಸಿದ್ದು, ಪ್ರಕರಣದ ತನಿಖೆಯನ್ನು ಕೈಗೊಳ್ಳಲಾಗಿದೆ.
Next Story




