Bengaluru | ಬಸ್ ಏರಲು ಬಂದ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಬೀಳಿಸಿದ್ದ ಬಿಎಂಟಿಸಿ ನಿರ್ವಾಹಕ ಅಮಾನತು

ಬೆಂಗಳೂರು : ಬಸ್ ಏರಲು ಬಂದ ಪ್ರಯಾಣಿಕನನ್ನು ಕಾಲಿನಿಂದ ಒದ್ದು ಕೆಳಗೆ ತಳ್ಳಿದ್ದ ಆರೋಪದಡಿಯಲ್ಲಿ ಬಿಎಂಟಿಸಿ ನಿರ್ವಾಹಕನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆದೇಶ ಹೊರಡಿಸಿದೆ.
ನೆಲಮಂಗಲ ಟೋಲ್ ಬಳಿ ಆಗಸ್ಟ್ 2ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಬಸ್ ಏರಲು ಬಂದ ವ್ಯಕ್ತಿಗೆ ನಿರ್ವಾಹಕ ಕಾಲಿನಿಂದ ಒದ್ದು ಬೀಳಿಸುತ್ತಿರುವ ದೃಶ್ಯ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರರೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ನಿರ್ವಾಹಕನ ಈ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತವಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಿಎಂಟಿಸಿ ಉನ್ನತಾಧಿಕಾರಿಗಳು, ಸಂಬಂಧಪಟ್ಟ ಬಸ್ ನಿರ್ವಾಹಕ ಕೃಷ್ಣಮೂರ್ತಿ ಅವರನ್ನು ವಿಚಾರಣಾಪೂರ್ವ ಅಮಾನತಿನಲ್ಲಿರಿಸಿ ಆದೇಶಿಸಿದ್ದಾರೆ.
Next Story




