Bengaluru | ನಾಲ್ಕನೆಯ ಮಹಡಿಯಿಂದ ಬಿದ್ದ ಮಗುವಿಗೆ ಗಂಭೀರ ಗಾಯ

ಬೆಂಗಳೂರು : ಆಟವಾಡುತ್ತಿದ್ದ ಪುಟ್ಟ ಮಗುವೊಂದು ನಾಲ್ಕನೆಯ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಆಡುಗೋಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಆಗಸ್ಟ್ 15ರಂದು ಬೆಳಗ್ಗೆ 10.50ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮಗು ಮಹಡಿಗೆ ಅಳವಡಿಸಿದ್ದ ಗ್ರಿಲ್ ಮೇಲೆ ಹತ್ತಿದ್ದು, ಆಯತಪ್ಪಿ 4ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದೆ. ಮಗು ಮಹಡಿಯಿಂದ ಕೆಳಗೆ ಬೀಳುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಕಣ್ಣಾರೆ ಕಂಡ ಸ್ಥಳೀಯರು ಕ್ಷಣಮಾತ್ರವೂ ತಡಮಾಡದೆ ಮಗುವಿನ ರಕ್ಷಣೆಗೆ ಧಾವಿಸಿದ್ದಾರೆ. ಬೈಕ್‍ನಲ್ಲೇ ಮಗುವನ್ನು ಕರೆದೊಯ್ದ ಸ್ಥಳೀಯರು, ತಕ್ಷಣ ಕೋರಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸಾವು-ಬದುಕಿನ ನಡುವೆ ಪುಟ್ಟ ಕಂದ ಹೋರಾಟ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
Next Story




