Bengaluru | ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳ ಬಂಧನ

ಬೆಂಗಳೂರು : ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾ, ಎಂ.ಡಿ.ಎಂ.ಎ ಮತ್ತು ಹೈಡೋಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೂವರು ಹೊರ ರಾಜ್ಯದ ಆರೋಪಿಗಳು ಸೇರಿ ಆರು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದು, 14.94 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಬೊಮ್ಮನಹಳ್ಳಿ, ಸಿಟಿ ಮಾರ್ಕೆಟ್, ಡಿ.ಜೆ.ಹಳ್ಳಿ ಹಾಗೂ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿಗಳನ್ನಾಧಾರಿಸಿ ಠಾಣೆಗಳಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಾಗಿದ್ದವು.
ದೂರುದಾರರು ತಿಳಿಸಿದ ಸ್ಥಳಗಳ ಮೇಲೆ ದಾಳಿ ಮಾಡಿ, ಮೂವರು ಹೊರ ರಾಜ್ಯದ ಹಾಗೂ ಮೂವರು ಸ್ಥಳೀಯ ವ್ಯಕ್ತಿಗಳು ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 25.37 ಕೆಜಿ ಗಾಂಜಾ, 20 ಗ್ರಾಂ ಎಂ.ಡಿ.ಎಂ.ಎ ಮತ್ತು 7 ಗ್ರಾಂ ಹೈಡೋಗಾಂಜಾ ವಶಕ್ಕೆ ಪಡೆದಿದ್ದಾರೆ.
Next Story




