Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉದ್ಯಾನವನಗಳ ತಿದ್ದುಪಡಿ ವಿಧೇಯಕಕ್ಕೆ...

ಉದ್ಯಾನವನಗಳ ತಿದ್ದುಪಡಿ ವಿಧೇಯಕಕ್ಕೆ ಆಕ್ಷೇಪ; ಲಾಲ್‍ಬಾಗ್‍ನಲ್ಲಿ ಗ್ರೀನ್ ಪೀಸ್ ಕಾರ್ಯಕರ್ತರ ಧರಣಿ

ವಾರ್ತಾಭಾರತಿವಾರ್ತಾಭಾರತಿ27 Aug 2026 6:46 PM IST
share
ಉದ್ಯಾನವನಗಳ ತಿದ್ದುಪಡಿ ವಿಧೇಯಕಕ್ಕೆ ಆಕ್ಷೇಪ; ಲಾಲ್‍ಬಾಗ್‍ನಲ್ಲಿ ಗ್ರೀನ್ ಪೀಸ್ ಕಾರ್ಯಕರ್ತರ ಧರಣಿ

ಬೆಂಗಳೂರು : ಉದ್ಯಾನವನಗಳ ಶೇ.5ರಷ್ಟು ಭೂಮಿಯನ್ನು ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಸಹಿತ ಇತರ ಉದ್ದೇಶಗಳಿಗೆ ವರ್ಗಾಯಿಸಲು ಅವಕಾಶ ಕಲ್ಪಿಸುವ ‘ಸರಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕ’ವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಲಾಲ್‍ಬಾಗ್‍ನಲ್ಲಿ ‘ಗ್ರೀನ್ ಪೀಸ್ ಇಂಡಿಯಾ’ ವತಿಯಿಂದ ಧರಣಿ ನಡೆಸಲಾಯಿತು.

ಗುರುವಾರ ಭಿತ್ತಿಪತ್ರಗಳನ್ನು ಹಿಡಿದ ಕಾರ್ಯಕರ್ತರು, ‘ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ಪರಿಸರ ಸಂರಕ್ಷಣೆಯ ಹೊರತಾದ ಉದ್ದೇಶಕ್ಕೆ ಪಾರ್ಕ್‍ನ ಭೂಮಿ ಬಳಕೆ, ಪರಿವರ್ತನೆ ಅಥವಾ ನಿರ್ಮಾಣ ಕಾರ್ಯಗಳಿಂದ ರಕ್ಷಿಸಬೇಕು. ಎಲ್ಲ ಮೂಲಸೌಕರ್ಯ ಯೋಜನೆಗಳು ಅಸ್ತಿತ್ವದಲ್ಲಿರುವ ಉದ್ಯಾನವನಗಳು ಅಥವಾ ಹಸಿರು ಪ್ರದೇಶಗಳನ್ನು ಹೊರತುಪಡಿಸಿದ ಪರ್ಯಾಯ ಮಾರ್ಗಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕ ಹಸಿರು ಪ್ರದೇಶದ ಮೇಲೆ ಪರಿಣಾಮ ಬೀರುವ ಯಾವುದೇ ಪ್ರಸ್ತಾವನೆಯನ್ನು ಪರಿಗಣಿಸುವ ಮೊದಲು ಪಾರದರ್ಶಕ ಸಾರ್ವಜನಿಕ ಸಮಾಲೋಚನೆಯನ್ನು ಕಡ್ಡಾಯಗೊಳಿಸಬೇಕು. ಪರಿಸರ, ಸಾಮಾಜಿಕ, ಆರೋಗ್ಯ ಮತ್ತು ಸಾರ್ವಜನಿಕ ಯೋಗಕ್ಷೇಮ ಮೌಲ್ಯಮಾಪನಗಳನ್ನು ಕಡ್ಡಾಯಗೊಳಿಸಬೇಕು. ನಗರ ಯೋಜನೆ ಮತ್ತು ಅಭಿವೃದ್ಧಿಯ ಚೌಕಟ್ಟಿನಲ್ಲಿ ಪಾರ್ಕ್‍ಗಳು ಮತ್ತು ನಗರ ಹಸಿರು ಪ್ರದೇಶಗಳನ್ನು ಅಗತ್ಯ ಮೂಲಸೌಕರ್ಯಗಳೆಂದು ಗುರುತಿಸಬೇಕು ಎಂದು ಕೋರಿದರು.

ಹಸಿರು ಪ್ರದೇಶವೂ ಮೂಲಸೌಕರ್ಯವೇ. ಅದನ್ನು ಸಾರ್ವಜನಿಕ ಆಸ್ತಿಯಾಗಿ ಮತ್ತು ಎಲ್ಲರಿಗೂ ಸೇರಿರುವ ಸಾಮೂಹಿಕ ಸಂಪತ್ತಾಗಿ ರಕ್ಷಿಸಬೇಕು. ಉದ್ಯಾನವನಗಳ ಕೆಲವು ಭಾಗಗಳನ್ನು ಮೂಲಸೌಕರ್ಯ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ಸಂಪುಟದ ನಿರ್ಧಾರವನ್ನು ವಿರೋಧಿಸುತ್ತೇವೆ ಎಂದು ಅವರುಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X