Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | 3 ಸಾವಿರ ಉರ್ದು ಶಿಕ್ಷಕರ...

Bengaluru | 3 ಸಾವಿರ ಉರ್ದು ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ10 Sept 2026 9:09 PM IST
share
Bengaluru | 3 ಸಾವಿರ ಉರ್ದು ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

ಬೆಂಗಳೂರು : ಪ್ರಸ್ತುತ ಹದಿನೈದು ಸಾವಿರ ಶಿಕ್ಷಕರ ನೇಮಕಾತಿಯಲ್ಲಿಯೇ 3ಸಾವಿರ ಉರ್ದು ಶಿಕ್ಷಕರ ಹುದ್ದೆಗಳನ್ನು ಸೇರಿಸಿ ಭರ್ತಿ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉಮ್ಮತಿ ಫೌಂಡೇಷನ್, ಕರ್ನಾಟಕ ತೆಹ್ರೀಕ್-ಎ-ಇನ್ಸಾಫ್ ಹಾಗೂ ಹಿಂದೂಸ್ಥಾನಿ ಉರ್ದು ಮಂಚ್ ಸಹಯೋಗದೊಂದಿಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು.

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಆ.12ರ ಗೆಜೆಟ್ ಅಧಿಸೂಚನೆಯನ್ನು ಮರುಪರಿಶೀಲಿಸಿ ಸೂಕ್ತವಾಗಿ ಮಾರ್ಪಡಿಸಬೇಕು. ಶಾಲೆಗಳಲ್ಲಿ ವಾಸ್ತವಿಕ ಖಾಲಿ ಹುದ್ದೆಗಳ ಆಧಾರದ ಮೇಲೆ, ಉರ್ದು ಮಾಧ್ಯಮದ ಪಿಎಸ್‍ಟಿ, ಜಿಪಿಟಿ ಮತ್ತು ಎಚ್‍ಎಸ್‍ಟಿಆರ್ / ಸಹಾಯಕ ಶಿಕ್ಷಕರ ಅಗತ್ಯ ಸಂಖ್ಯೆಯ ಹುದ್ದೆಗಳನ್ನು ಸೇರಿಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ನೇಮಕಾತಿಯನ್ನು ಅಂತಿಮಗೊಳಿಸುವ ಮೊದಲು ಕರ್ನಾಟಕಾದ್ಯಂತ ಉರ್ದು ಮಾಧ್ಯಮದ ಖಾಲಿ ಬೋಧಕ ಹುದ್ದೆಗಳ ಹೊಸ ಮೌಲ್ಯಮಾಪನವನ್ನು ನಡೆಸಬೇಕು. ಶಿಕ್ಷಕರ ನೇಮಕಾತಿ ಅವಕಾಶವನ್ನು ಮುಖ್ಯವಾಗಿ ಕನ್ನಡ ಮಾಧ್ಯಮಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಕನ್ನಡ ಮತ್ತು ಇತರ ಅರ್ಹ ಮಾಧ್ಯಮಗಳ ಜೊತೆಗೆ ಉರ್ದು ಮಾಧ್ಯಮದ ಹುದ್ದೆಗಳನ್ನು ಸೇರಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ದೀರ್ಘಕಾಲದವರೆಗೆ ಬಾಕಿ ಉಳಿದಿರುವ ಉರ್ದು ಮಾಧ್ಯಮದ ಖಾಲಿ ಹುದ್ದೆಗಳನ್ನು ನಿಯಮಿತ, ಖಾಯಂ ಶಿಕ್ಷಕರ ಮೂಲಕ ಭರ್ತಿ ಮಾಡಬೇಕು. ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾಗಿ ಮತ್ತು ಹಲವು ವರ್ಷಗಳಿಂದ ಸಿಇಟಿ ನೇಮಕಾತಿಗಾಗಿ ತಯಾರಿ ನಡೆಸುತ್ತಿರುವ ಅರ್ಹ ಉರ್ದು ಮಾಧ್ಯಮ ಅಭ್ಯರ್ಥಿಗಳಿಗೆ ಪ್ರಸ್ತುತ ನೇಮಕಾತಿಯಲ್ಲಿ ನ್ಯಾಯಯುತ ಅವಕಾಶ ಸಿಗುವುದನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ನೇಮಕಾತಿ ಪ್ರಕ್ರಿಯೆಯು ಸಮಾನ ಉದ್ಯೋಗದ ತತ್ವಗಳನ್ನು ಹಾಗೂ ಭಾಷಾ ಅಲ್ಪಸಂಖ್ಯಾತರ ಶೈಕ್ಷಣಿಕ ಹಿತಾಸಕ್ತಿಗಳು ಮತ್ತು ಹಕ್ಕುಗಳನ್ನು ಗೌರವಿಸುವುದನ್ನು ಖಚಿತಪಡಿಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ರಾಜ್ಯದಲ್ಲಿ 3,947 ಉರ್ದು ಮಾಧ್ಯಮ ಶಾಲೆಗಳಿವೆ. ಸುಮಾರು 2,73,573 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಪ್ರಾಥಮಿಕ ಶಾಲಾ ಮಟ್ಟದಲ್ಲಿ 4,142 ಹುದ್ದೆಗಳು, ಪ್ರೌಢಶಾಲಾ ಮಟ್ಟದಲ್ಲಿ 610 ಹುದ್ದೆಗಳು ಖಾಲಿ ಇದ್ದು ಸರಕಾರ ಕೂಡಲೇ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ ಅಧ್ಯಕ್ಷ ಮುಹಮ್ಮದ್ ನಾಸೀರ್, ಉಮ್ಮತಿ ಫೌಂಡೇಷನ್ ಅಧ್ಯಕ್ಷ ಝಮೀರ್ ಅಹ್ಮದ್, ಉರ್ದು ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷೆ ಝೈಬಾ, ಉರ್ದು ಶಿಕ್ಷಕ ಹುದ್ದೆ ಆಕಾಂಕ್ಷಿ ನೂರ್ ಜಹಾನ್ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X