Bengaluru | ನಿಲ್ಲಿಸಿದ್ದ ರೈಲಿನ ಎರಡು ಖಾಲಿ ಬೋಗಿಗಳಿಗೆ ಬೆಂಕಿ

ಬೆಂಗಳೂರು : ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಎರಡು ಖಾಲಿ ರೈಲು ಬೋಗಿಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಮಾಕ್ ಡ್ರಿಲ್ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಈ ಬೋಗಿಗಳು ಕಳೆದ ಒಂದು ವರ್ಷದಿಂದ ಹಳಿ ಮೇಲೆ ನಿಂತಿದ್ದವು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಅಥವಾ ಇತರ ಹಾನಿ ಸಂಭವಿಸಿಲ್ಲ. ಖಾಲಿ ಬೋಗಿಗಳು ಮಾತ್ರ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story




