Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಎಸ್‍ಐಆರ್ ವಿರುದ್ಧ...

Bengaluru | ಎಸ್‍ಐಆರ್ ವಿರುದ್ಧ ಪ್ರತಿಭಟನೆ: 50 ಮಂದಿ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ18 Oct 2026 8:25 PM IST
share
Bengaluru | ಎಸ್‍ಐಆರ್ ವಿರುದ್ಧ ಪ್ರತಿಭಟನೆ: 50 ಮಂದಿ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್)ವಿರುದ್ಧ ಹಾಗೂ ದಿಲ್ಲಿಯಲ್ಲಿನ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ ವತಿಯಿಂದ ನಗರದ ಪುರಭವನದ ಬಳಿ ಪ್ರತಿಭಟನೆ ನಡೆಸಿದ 50ಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು, ಅನಂತರ ಬಿಡುಗಡೆಗೊಳಿಸಿದ ಘಟನೆ ನಡೆದಿದೆ.

ಅ.16ರಂದು ದಿಲ್ಲಿಯಲ್ಲಿ ಹೋರಾಟಗಾರ್ತಿ ನೇಹಾ ಬೋರಾ ಅವರನ್ನು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನೇಹಾ ಅವರ ಬಂಧನ ಖಂಡಿಸಿ, ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ತ್ರಿವರ್ಣ ಧ್ವಜವನ್ನು ಹಿಡಿದು ಮೆರವಣಿಗೆ ನಡೆಸಲು ಮುಂದಾದರು.

ಈ ವೇಳೆ ಪೊಲೀಸರು, ‘ಫ್ರೀಡಂ ಪಾರ್ಕ್ ಹೊರತು ನಗರದಲ್ಲಿ ಬೇರೆಡೆ ಪ್ರತಿಭಟನೆಗೆ ಅವಕಾಶವಿಲ್ಲ’ ಎಂದು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಆಕ್ಷೇಪಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇತ್ತೀಚೆಗೆ ನೀಡಿದ ಸೂಚನೆಗಳ ಹೊರತಾಗಿಯೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಉಭಯ ನಾಯಕರು, ಬೆಂಗಳೂರು ಪೊಲೀಸರಿಗೆ, ಪ್ರತಿಭಟನಾಕಾರರೊಂದಿಗೆ ಸಹಕರಿಸುವಂತೆ ಮತ್ತು ಪ್ರತಿಭಟನೆಯ ಹಕ್ಕನ್ನು ಚಲಾಯಿಸಲು ಅನುಮತಿಸುವಲ್ಲಿ ನಿರಂಕುಶವಾಗಿ ವರ್ತಿಸದಂತೆ ನಿರ್ದೇಶನ ನೀಡಿದ್ದರು ಎಂದು ಐಸಾ ಸದಸ್ಯೆ ಅಕ್ವಿಲಿನ್ ತಿಳಿಸಿದರು.

ಪೊಲೀಸರು ಕೆಲವು ಪ್ರತಿಭಟನೆಗಳಿಗೆ ಮಾತ್ರ ಅನುಮತಿ ನೀಡುತ್ತಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಎಬಿವಿಪಿ ಪ್ರತಿಭಟನೆಗೆ ಅವಕಾಶ ನೀಡಲಾಯಿತು; ಸಿಜೆಪಿಯ ತಿರಂಗಾ ಯಾತ್ರೆಗೆ ಅನುಮತಿ ನೀಡಲಾಯಿತು. ಆದರೆ ಯಾವುದೋ ಕಾರಣಕ್ಕಾಗಿ, ಐಸಾ (ಎಐಎಸ್‍ಎ) ಸಂಘಟನೆಗೆ ಫ್ರೀಡಂ ಪಾರ್ಕ್‍ನಿಂದ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಎಬಿವಿಪಿ ಪ್ರತಿಭಟನೆ ಜಯನಗರದಲ್ಲಿ ನಡೆಯಿತು, ತಿರಂಗಾ ಯಾತ್ರೆ ಟೌನ್‍ಹಾಲ್ ಬಳಿ ನಡೆಯಿತು. ಹಾಗಾಗಿ, ಯಾವುದಕ್ಕೆ ಅನುಮತಿ ಇದೆ. ಯಾವುದಕ್ಕೆ ಇಲ್ಲ ಎನ್ನುವುದರಲ್ಲಿ ಸ್ಪಷ್ಟವಾಗಿ ಒಂದು ನಿರಂಕುಶ ಧೋರಣೆ ಕಾಣಿಸುತ್ತಿದೆ ಎಂದು ತಿಳಿಸಿದರು.

‘ಪೊಲೀಸರೊಂದಿಗೆ ನಮ್ಮ ಕೈಲಾದಷ್ಟು ಮಟ್ಟಿಗೆ ಸಹಕರಿಸಲು ಪ್ರಯತ್ನಿಸುತ್ತಿದ್ದೇವೆ. ಎಸ್‍ಐಆರ್ ಬಗ್ಗೆ ಎಲ್ಲರ ಗಮನ ಸೆಳೆಯುವ ತುರ್ತು ಅಗತ್ಯವಿದೆ. ಏಕೆಂದರೆ ಈ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಅಂತಿಮ ಕರಡು ಮತದಾರರ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಈ ವಿಷಯದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಜೊತೆಗೆ ದಿಲ್ಲಿ ಮತ್ತು ದೇಶದ ಇತರ ಭಾಗಗಳಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆಯೂ ಧ್ವನಿ ಎತ್ತಬೇಕಿದೆ’

-ಅಕ್ವಿಲಿನ್, ಐಸಾ ಸದಸ್ಯೆ

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X