Bengaluru | ವಿನಾಯಕ ಲೇಔಟ್ನಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದ ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಸದ್ಯ ಪ್ರಕರಣದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದ್ದು, ತಾಯಿ ಲಕ್ಷ್ಮಮ್ಮ ಹಾಗೂ ಅವಳಿ ಮಕ್ಕಳಾದ ಗೀತಾ ಮತ್ತು ಗಿರಿಜಾ ಮೃತಪಟ್ಟಿದ್ದಾರೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ರಾಯಚೂರು ಮೂಲದ ಕುಟುಂಬ ವಾಸವಾಗಿತ್ತು. ಕಳೆದ ಅ.2ರಂದು ಬೆಳಿಗ್ಗೆ ತಿಂಡಿ ಮಾಡಲು ಒಲೆ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ದುರಂತದಲ್ಲಿ ಇಡೀ ಕುಟುಂಬ ಗಂಭೀರವಾಗಿ ಗಾಯಗೊಂಡಿತ್ತು.
Next Story




