Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಸಮಗ್ರ ವಕೀಲರ ರಕ್ಷಣಾ...

Bengaluru | ಸಮಗ್ರ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ3 Nov 2026 8:42 PM IST
share
Bengaluru | ಸಮಗ್ರ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ

ಬೆಂಗಳೂರು : ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ಹತ್ಯೆ ಹಾಗೂ ಕೊಲೆ ಯತ್ನದ ಘಟನೆಗಳನ್ನು ಖಂಡಿಸಿ ಹಾಗೂ ಸಮಗ್ರ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಮಂಗಳವಾರ ನಗರದ ಹೈಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ಮಾಡುವ ಮೂಲಕ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು.

ಈ ವೇಳೆಯಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಒಂದು ತಿಂಗಳ ಅವಧಿಯಲ್ಲಿ ವಕೀಲರ ಮೇಲೆ ಹಲವು ಹಲ್ಲೆ ಪ್ರಕರಣಗಳು, ಎರಡು ಕೊಲೆಗಳು ಹಾಗೂ ಒಂದು ಕೊಲೆ ಯತ್ನದ ಘಟನೆಗಳು ನಡೆದಿವೆ. ಈ ಘಟನೆಗಳು ರಾಜ್ಯದ ವಕೀಲ ಸಮುದಾಯಕ್ಕೆ ಆಘಾತ ಉಂಟುಮಾಡಿದ್ದು, ವಕೀಲರಲ್ಲಿ ಆತಂಕ ಮೂಡಿಸಿವೆ. ನ್ಯಾಯಕ್ಕಾಗಿ ಹೋರಾಡುವ ವಕೀಲರು ನಿರ್ಭೀತಿಯಿಂದ ತಮ್ಮ ವೃತ್ತಿ ನಿರ್ವಹಿಸಲು ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ವಕೀಲರ ರಕ್ಷಣಾ ಕಾಯ್ದೆಯನ್ನು ಸರಕಾರ 2024ರಲ್ಲಿ ರೂಪಿಸಿದ್ದರೂ, ಅದರಲ್ಲಿ ಇನ್ನಷ್ಟು ಬಲಿಷ್ಠ ಕಾನೂನು ನಿಬಂಧನೆಗಳು ಸೇರ್ಪಡೆ ಮಾಡಬೇಕಿದೆ. ಪ್ರಸ್ತುತ ಕಾಯ್ದೆಯಲ್ಲಿರುವ ಜಾಮೀನು ನೀಡಬಹುದಾದ ಅಪರಾಧಗಳ ಬದಲಿಗೆ ಜಾಮೀನು ರಹಿತ ಅಪರಾಧಗಳನ್ನಾಗಿ ಪರಿಗಣಿಸುವುದು ಹಾಗೂ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಬೇಕು. ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ವಕೀಲರಿಗೆ ಪರಿಣಾಮಕಾರಿ ರಕ್ಷಣೆ ನೀಡಬೇಕು ಎಂದು ಅವರು ತಿಳಿಸಿದರು.

ಇತ್ತೀಚೆಗೆ ನಡೆದ ಎರಡು ಕೊಲೆಗಳು ಹಾಗೂ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ವಕೀಲರು ದೂರು ನೀಡಲು ಅಥವಾ ಆರೋಪಿಗಳ ಪರವಾಗಿ ಕಾನೂನು ನೆರವು ಒದಗಿಸಲು ಪೊಲೀಸ್ ಠಾಣೆಗಳಿಗೆ ತೆರಳಿದಾಗ ಕೆಲ ಅಧಿಕಾರಿಗಳಿಂದ ಅಗೌರವ ಹಾಗೂ ದರ್ಪದ ವರ್ತನೆ ಎದುರಿಸಬೇಕಾಗಿದೆ.

ಈ ಬಗ್ಗೆ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಗಮನಹರಿಸಿ, ಪೊಲೀಸ್ ಠಾಣೆಗಳಿಗೆ ವಕೀಲರು ಹಾಗೂ ಸಾರ್ವಜನಿಕರು ಭೇಟಿ ನೀಡಿದಾಗ ಹೇಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂಬುದರ ಕುರಿತು ಪ್ರಮಾಣಿತ ಕಾರ್ಯಾಚರಣಾ ವಿಧಾನ(ಎಸ್‍ಒಪಿ) ರೂಪಿಸಬೇಕು ಎಂದು ವಿವೇಕ್ ಸುಬ್ಬಾರೆಡ್ಡಿ ಆಗ್ರಹಿಸಿದರು.

ಹೋರಾಟದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್. ಹಾಗೂ ಖಜಾಂಚಿ ಶ್ವೇತಾ ರವಿಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X