Bengaluru | ವಿಮಾನ ನಿಲ್ದಾಣದಲ್ಲಿ 5.51 ಕೋಟಿ ರೂ.ಮೌಲ್ಯದ ಗಾಂಜಾ ವಶ, ಓರ್ವ ವಶಕ್ಕೆ

ಸಾಂದರ್ಭಿಕ ಚಿತ್ರ | PC : Image by macrovector on Magnific
ಬೆಂಗಳೂರು : ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು, 5.51 ಕೋಟಿ ರೂ. ಮೌಲ್ಯದ 15.750 ಕೆ.ಜಿ. ಹೈಡೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಥಾಯ್ಲೆಂಡ್ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನನ್ನು ತಪಾಸಣೆ ನಡೆಸಿದಾಗ ಈ ಮಾದಕ ವಸ್ತು ಪತ್ತೆಯಾಗಿದೆ. ಪ್ರಯಾಣಿಕನ ಲಗೇಜ್ನಲ್ಲಿ ಹೈಡೋಪೋನಿಕ್ ಗಾಂಜಾವನ್ನು ರಹಸ್ಯವಾಗಿ ಅಡಗಿಸಿಟ್ಟಿರುವುದು ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ವಶಪಡಿಸಿಕೊಂಡಿರುವ 15.750 ಕೆ.ಜಿ. ಗಾಂಜಾದ ಅಂದಾಜು ಮೌಲ್ಯ 5.31 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story




