Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ಶಾಸಕ ಮುನಿರತ್ನ ರಾಜೀನಾಮೆಗೆ...

ಬೆಂಗಳೂರು: ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಧರಣಿ

ವಾರ್ತಾಭಾರತಿವಾರ್ತಾಭಾರತಿ16 Sept 2024 3:52 PM IST
share
ಬೆಂಗಳೂರು: ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಧರಣಿ

ಬೆಂಗಳೂರು: ಜಾತಿ ನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಧರಣಿ ನಡೆಸಿದರು.

ಮಹಿಳಾ, ದಲಿತ ವಿರೋಧಿ ಶಾಸಕನನ್ನು ಕಿತ್ತೊಗೆಯಿರಿ, ಮುನಿರತ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮೋಹನ್ ದಾಸರಿ, ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ? ದಲಿತ ಸಮುದಾಯದವರ ಬಳಿ ಬಿಜೆಪಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬಬೇಕು ಎಂದು ಒತ್ತಾಯಿಸಿದರು.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಮುನಿರತ್ನ ಹಾಗೂ ಅವರ ಆಪ್ತ ವಸಂತ ಕುಮಾರ್ ಅವರು ರೂ.30 ಲಕ್ಷಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರು ದೂರು ನೀಡಿದ್ದಾರೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಆಡಿಯೊದಲ್ಲಿನ ಮುನಿರತ್ನ ಅವರ ಮಾತುಗಳು ಕೇವಲ ಅವರೊಬ್ಬರ ವೈಯಕ್ತಿಕ ಹೇಳಿಕೆಯಲ್ಲ, ಸಮಸ್ತ ಬಿಜೆಪಿಗರ ಮನಸ್ಥಿತಿಯ ಪ್ರತಿರೂಪ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ವಾಸ್ತವದಲ್ಲಿ ದಲಿತರನ್ನು, ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಮುನಿರತ್ನ ಆಡಿರುವ ಮಾತುಗಳೇ ಸಾಕ್ಷಿ. ಗುತ್ತಿಗೆದಾರರೊಬ್ಬರಿಗೆ ಕಮಿಷನ್ ಕಿರುಕುಳ ನೀಡುತ್ತ, ಅವಾಚ್ಯವಾಗಿ ಅವರ ತಾಯಿಯನ್ನು ನಿಂದಿಸುತ್ತ ಕೊಲೆ ಬೆದರಿಕೆ ಒಡ್ಡಿರುವುದು ಆಘಾತಕಾರಿ ವಿಚಾರ. ಇಂತಹ ಜನಪ್ರತಿನಿಧಿಗಳಿದ್ದರೆ ಗುತ್ತಿಗೆದಾರರು, ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ ಮಾತನಾಡಿ, ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಗುತ್ತಿಗೆದಾರನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇಂಥ ಭ್ರಷ್ಟ ಶಾಸಕನನ್ನು ಬಿಜೆಪಿಯು ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಆಪ್ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸರ್ರಾವ್ ಮಾತನಾಡಿ, ತಾಯಿಯ ಬಗ್ಗೆ ಹೇಯವಾಗಿ ಮಾತನಾಡಿರುವ ಮುನಿರತ್ನ ಜನಪ್ರತಿನಿಧಿಯಾಗಿ ಮುಂದುವರಿಯಲು ಅನರ್ಹರು. ಬಿಜೆಪಿಯು ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಮುನಿರತ್ನ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಪಕ್ಷದ ಎಸ್ಸಿಎಸ್ಟಿ ವಿಭಾಗದ ಅಧ್ಯಕ್ಷ ಸಿದ್ದು, ಮುಖಂಡರಾದ ಜಗದೀಶ ಬಾಬು, ಲೋಕೇಶ್, ಶಶಿಧರ್ ಆರಾಧ್ಯ, ಅನಿಲ್ ನಾಚಪ್ಪ, ಅನಿತಾ, ಶರಣ್ಯ, ಕಲೈ, ಮುನೀಂದ್ರ, ಶರವಣ ಸೇರಿದಂತೆ ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X