ಬೆಂಗಳೂರು | ದ್ವಿಚಕ್ರ ವಾಹನಕ್ಕೆ ಆಂಬ್ಯುಲೆನ್ಸ್ ಢಿಕ್ಕಿ; ದಂಪತಿ ಮೃತ್ಯು

ಬೆಂಗಳೂರು : ಆಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ಶಾಂತಿನಗರದ ಕೆ.ಎಚ್.ರಸ್ತೆಯ ಸಂಗೀತಾ ಸಿಗ್ನಲ್ ಬಳಿ ನಡೆದಿವುದು ವರದಿಯಾಗಿದೆ.
ದ್ವಿಚಕ್ರ ವಾಹನದಲ್ಲಿದ್ದ ಇಸ್ಮಾಯಿಲ್ ಹಾಗೂ ಸಮೀನ್ ಬಾನು ಮೃತರು ಎಂದು ತಿಳಿದು ಬಂದಿದೆ.
ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿದ್ದಾನೆ. ಆಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನವನ್ನು 20- 30 ಮೀಟರ್ ಎಳೆದುಕೊಂಡು ಚಲಾಯಿಸಿದ್ದಾನೆ ಎನ್ನಲಾಗಿದೆ. ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ನಿಲ್ಲಿಸಿ ಪರಾರಿಯಾಗಿದ್ದಾನೆ.
ಸ್ಥಳೀಯರು ಬಂದು ಆಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಆಂಬ್ಯುಲೆನ್ಸ್ ಅಡಿ ಸಿಲುಕಿ ಮೃತಪಟ್ಟಿರುವುದು ಗೊತ್ತಾಗಿದೆ.
ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ.





