Bengaluru | ಕಾರು ಢಿಕ್ಕಿ: ಬಾಲಕಿ ಸಾವು

ಬೆಂಗಳೂರು : ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ, ಬಾಲಕಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲದ ಕುದೂರು ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.
ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಲಿಖಿತಾ(10) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಲಿಖಿತಾ ಎಂದಿನಂತೆ ಶಾಲೆಗೆ ನಡೆದುಕೊಂಡು ಹೋಗುವಾಗ ನೆಲಮಂಗಲ ಮಾರ್ಗದಿಂದ ಕುಣಿಗಲ್ ಕಡೆ ವೇಗವಾಗಿ ಹೋಗುತ್ತಿದ್ದ ಕಾರು ಆಕೆಗೆ ಡಿಕ್ಕಿ ಹೊಡೆದಿದ್ದು, ಲಿಖಿತಾ ಮೃತಪಟ್ಟಿದ್ದಾಳೆ. ಆಕೆಯ ಜೊತೆಗಿದ್ದ ದೊಡ್ಡಮ್ಮ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕುದೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಪರಾರಿಯಾಗಿರುವ ಕಾರು ಚಾಲಕನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.
Next Story




