ಬೆಂಗಳೂರು : ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಅಪರಿಚಿತ ವ್ಯಕ್ತಿ ಮೃತ್ಯು
ಬೆಂಗಳೂರು : ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿಯ ರೈಲ್ವೇ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಅಪರಿಚಿತ ವ್ಯಕ್ತಿಯು ರೈಲ್ವೇ ಬ್ರಿಡ್ಜ್ ಮೇಲಿಂದ ಕಾರಿನ ಮೇಲೆ ಬಿದ್ದಿದ್ದು, ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯು ಸುಮಾರು 35ರಿಂದ 40 ವರ್ಷದ ಆಸುಪಾಸಿನವನಾಗಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನಗರದ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯು ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವುದಾಗಿ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story