Bengaluru : ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಸ್ಯಾಂಡಲ್ವುಡ್ ನಟಿ ಹಾಗೂ ಬಿಗ್ಬಾಸ್ ಮಾಜಿ ಸ್ಪರ್ಧಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಆರ್ ನಗರದಲ್ಲಿರುವ ಎಲಿಗೆಂಟ್ ಟೆರೇಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ವೈಶಾಖ್ ಎಂದು ಗುರುತಿಸಲಾಗಿದೆ. ನಟಿ, ಸ್ನೇಹಿತೆ ಮನೆಯಲ್ಲಿ ಕಳೆದ ರಾತ್ರಿ ಯಾರೂ ಇಲ್ಲದಾಗ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ವೈಶಾಖ್ ತಂದೆ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Next Story




