Bengaluru | ಅಪ್ರಾಪ್ತೆಯ ಕತ್ತು ಸೀಳಿ ಭೀಕರ ಹತ್ಯೆ: ಆರೋಪಿ ಪತ್ತೆಗೆ ಶೋಧ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಅಪ್ರಾಪ್ತೆಯ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಕ್ಕರೆ ಮಂಡಿ ಸಮೀಪದ ಪಾಳು ಬಿದ್ದ ಮನೆಯಲ್ಲಿ ಮಂಗಳವಾರ ನಡೆದಿದೆ.
ಮಾ.17ರ ಮಂಗಳವಾರ ಮುಂಜಾನೆ 6:30ರ ಸುಮಾರಿಗೆ ಘಟನೆ ನಡೆದಿದ್ದು, 17 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ, ಡಿ.ಜೆ.ಹಳ್ಳಿ ಠಾಣೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿವೆ. ಶಬೀಲ್(20) ಎಂಬಾತ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಆತನ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಿದ ಆಯುಧ, ನಿಖರ ಕಾರಣಗಳ ಕುರಿತು ಆರೋಪಿಯ ಬಂಧನದ ಬಳಿಕ ತಿಳಿಯಬೇಕಿದೆ. ಶಂಕಿತನ ಬಂಧನಕ್ಕಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.
Next Story





