Bengaluru | ಆಟೋ–ಬೈಕ್ ನಡುವೆ ಢಿಕ್ಕಿ: ಯುವಕ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು: ಎಚ್ಎಸ್ಆರ್ ಲೇಔಟ್ನ 14ನೇ ಮುಖ್ಯರಸ್ತೆಯಲ್ಲಿ ಆಟೋ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬಿಹಾರ ಮೂಲದ ಯುವಕನೊಬ್ಬ ಮೃತಪಟ್ಟಿದ್ದಾರೆ. ಈ ಸಂಬಂಧ ಎಚ್ಎಸ್ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಬಿಹಾರ ಮೂಲದ ಸಾಹಿತ್ಯರಾಜ್ (23) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ರವಿವಾರ ಮುಂಜಾನೆ 3.30ರ ಸುಮಾರಿಗೆ ಎಚ್ಎಸ್ಆರ್ ಲೇಔಟ್ನ 14ನೇ ಮುಖ್ಯರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಬಳಿ ಆಟೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಸಾಹಿತ್ಯರಾಜ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story




