ಬೆಂಗಳೂರು: ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಾಸಕರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರವಿವಾರ ಮುತ್ತಿಗೆ ಯತ್ನ ನಡೆಸಿದರು.
ಇಲ್ಲಿನ ಚಾಲುಕ್ಯ ವೃತ್ತ ದಲ್ಲಿನ ರೇಸ್ ಕೋರ್ಸ್ ರಸ್ತೆ ಭಾರತೀಯ ವಿದ್ಯಾ ಭವನ ಹಿಂಭಾಗದ ಜನಾರ್ದನ ರೆಡ್ಡಿ ಪಾರಿಜಾತ ನಿವಾಸದ ಎದುರು ದಿಢೀರ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಬಳ್ಳಾರಿ ಸಮಾವೇಶದಲ್ಲಿ ಡಿಕೆಶಿ ಬಗ್ಗೆ ಜನಾರ್ದನ ರೆಡ್ಡಿ ಏಕವಚನದಲ್ಲಿ ಟೀಕಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ.
Next Story







