Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅವಧಿ ಮೀರಿದ ಆಹಾರ...

ಬೆಂಗಳೂರು | ಅವಧಿ ಮೀರಿದ ಆಹಾರ ಸಾಮಗ್ರಿಗಳ ಲೇಬಲ್ ಅಳಿಸಿ ಮಾರಾಟ: 10 ಲಕ್ಷ ರೂ. ಮೌಲ್ಯದ ಸಾಮಗ್ರಿ ವಶ

ವಾರ್ತಾಭಾರತಿವಾರ್ತಾಭಾರತಿ15 Dec 2023 10:08 AM IST
share
ಬೆಂಗಳೂರು | ಅವಧಿ ಮೀರಿದ ಆಹಾರ ಸಾಮಗ್ರಿಗಳ ಲೇಬಲ್ ಅಳಿಸಿ ಮಾರಾಟ: 10 ಲಕ್ಷ ರೂ. ಮೌಲ್ಯದ ಸಾಮಗ್ರಿ ವಶ

ಬೆಂಗಳೂರು, ಡಿ.15: ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ಅವುಗಳ ಲೇಬಲ್ ಅಳಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 10 ಲಕ್ಷ ರೂ. ಮೌಲ್ಯದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದಾಪುರ ಠಾಣೆ ವ್ಯಾಪ್ತಿಯ ಅರೆಕಂಪನಹಳ್ಳಿಯಲ್ಲಿರುವ ಎಚ್.ಎಂ.ಟ್ರೇಡರ್ಸ್ ಎಂಬ ದಿನಸಿ ಅಂಗಡಿ ಮಾಲಕ ಇಮ್ರಾನ್ ಖಾನ್(40) ಬಂಧಿತ ಆರೋಪಿ. ಈತ ತನ್ನ ಅಂಗಡಿಯಲ್ಲಿ ಅವಧಿ ಮೀರಿದ ಪ್ರತಿಷ್ಠಿತ ಕಂಪೆನಿಗಳಿಗೆ ಸೇರಿದ ಚಾಕಲೇಟ್, ಬಿಸ್ಕೆಟ್ ಮತ್ತು ತಿಂಡಿ, ತಿನಿಸು ಮತ್ತಿತರ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅವಧಿ ಮೀರಿದ ಪದಾರ್ಥಗಳ ಮೇಲಿನ ದಿನಾಂಕದ ಅವಧಿ ಮತ್ತು ದರ ಪಟ್ಟಿಯ ಲೇಬಲ್ ತೆಗೆದು ಹಾಕಿ, ಸಾರ್ವಜನಿಕರಿಗೆ ಮಾರುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆತನ ಮಳಿಗೆಯಲ್ಲಿದ್ದ 10 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಆಹಾರ ಪಾದರ್ಥಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಸಿಸಿಬಿ ಆರ್ಥಿಕ ಅಪರಾಧ ದಳದ ಎಸಿಬಿ ಮಂಜುನಾಥ್ ಚೌಧರಿ, ಇನ್ ಸ್ಪೆಕ್ಟರ್ ಸಂತೋಷ್ ರಾವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಸಗಟು ವ್ಯಾಪಾರಿಗಳಿಂದ ಖರೀದಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸಗಟು ವ್ಯಾಪಾರಿಗಳು ಕಂಪೆನಿಗಳಿಗೆ ಹಿಂದಿರುಗಿಸುತ್ತಾರೆ. ಆದರೆ, ಕೆಲ ಸಗಟು ವ್ಯಾಪಾರಿಗಳು, ಕಂಪೆನಿಗಳಿಂದ ಹಣ ವಾಪಸ್ ಬರುವುದು ತಡವಾಗುತ್ತದೆ ಎಂಬ ಕಾರಣಕ್ಕೆ, ಅಲ್ಪ ಮೊತ್ತಕ್ಕೆ ಇಂತಹ ವ್ಯಾಪಾರಿಗಳಿಗೆ ಮಾರುತ್ತಾರೆ. ಅವುಗಳನ್ನು ಖರೀದಿಸಿದ ವ್ಯಾಪಾರಿ ಅವುಗಳ ಮೇಲಿನ ಲೇಬಲ್ ತೆಗೆದು ಹಾಕಿ, ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಾನೆ ಎಂದು ಸಿಸಿಬಿ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X