Bengaluru | ಗೀತಂ ವಿಶ್ವವಿದ್ಯಾಲಯದ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ಬೆಂಗಳೂರು: ದೊಡ್ಡಬಳ್ಳಾಪುರ ಸಮೀಪದ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದ ವರ್ಷಿತಾ (20) ಎಂದು ಗುರುತಿಸಲಾಗಿದೆ. ಅವರು ಗೀತಂ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
Next Story




