Bengaluru | ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಬೆಂಕಿ

ಸಾಂದರ್ಭಿಕ ಚಿತ್ರ | Photo credit : AI
ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಬೆಳಗ್ಗೆ ಕೋರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆ ಸಮೀಪದ ಚೆಕ್ ಪೋಸ್ಟ್ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ.
ಪ್ರಯಾಣಿಕರೊಂದಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ ಅನ್ನು ರಸ್ತೆ ಬದಿ ಸುರಕ್ಷಿತವಾಗಿ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬಸ್ ನಲ್ಲಿದ್ದ ಅಗ್ನಿಶಾಮಕ ಉಪಕರಣ ಬಳಸಿ ಚಾಲಕ ಹಾಗೂ ನಿರ್ವಾಹಕರೇ ಬೆಂಕಿಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ.
ಹಾಗೆಯೇ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ.
ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಬಿಎಂಟಿಸಿಯ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಪ್ರಾಥಮಿಕ ಪರಿಶೀಲನೆ ವೇಳೆ ಕಂಡುಬಂದಿದೆ.




