Bengaluru | ‘ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ’ ಎಂದು ಹೇಳಿಕೊಂಡು ವೈದ್ಯನಿಗೆ ಕೋಟ್ಯಂತರ ರೂ.ವಂಚನೆ : ಆರೋಪಿ ಬಂಧನ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಯಾನೆ ಸುಜಯೇಂದ್ರ(40) ಎಂದು ಗುರುತಿಸಲಾಗಿದೆ.
ಆರೋಪಿ ಸುಜಯೇಂದ್ರ ಸಿಕ್ಕ ಸಿಕ್ಕವರ ಬಳಿ ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಅದೇ ರೀತಿ ಜಮ್ಮು-ಕಾಶ್ಮೀರದ ವೈದ್ಯರೊಬ್ಬರ ಬಳಿ ದೇವನಹಳ್ಳಿಯ ಬಳಿಯಲ್ಲಿ ಆಯುರ್ವೇದ ಆಸ್ಪತ್ರೆಯನ್ನು ತೆರೆಯಲು ಅವಕಾಶ ಮಾಡಿಕೊಡುತ್ತೇನೆಂದು 2.7 ಕೋಟಿ ಹಣವನ್ನು ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಸದ್ಯ ಸುಜಯೇಂದ್ರನನ್ನು ಬಂಧಿಸಿರುವ ವಿಜಯನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
Next Story





