ಬೆಂಗಳೂರು | ಏರ್‌ಪೋರ್ಟ್‌ನಲ್ಲಿ ಅಂಧ ಪ್ರಯಾಣಿಕನಿಂದ 3.44 ಕೋಟಿ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಅಂಧ ಪ್ರಯಾಣಿಕನೊಬ್ಬನಿಂದ 3.44 ಕೋಟಿ ಮೌಲ್ಯದ ಚಿನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಾ.4ರಂದು 3 ಕೆ.ಜಿ 995 ಗ್ರಾಂ ಚಿನ್ನದ ಆಭರಣವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ. ಆರೋಪಿ ಕುರುಡನಾಗಿರುವುದನ್ನೇ ಅನುಕೂಲ ಮಾಡಿಕೊಂಡು ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸುವ ಸಂಚು ರೂಪಿಸಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.
ಆರೋಪಿ ವರ್ತನೆ ಮೇಲೆ ಅನುಮಾನ ಬಂದ ಅಧಿಕಾರಿಗಳು, ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
Next Story





