Bengaluru | KPTCL ಪ್ರಧಾನ ಕಚೇರಿಯ 12ನೇ ಮಹಡಿಯಿಂದ ಹಾರಿ ಗ್ರೂಪ್-ಸಿ ನೌಕರ ಆತ್ಮಹತ್ಯೆ

ವಜ್ರಕುಮಾರ್
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕೆಪಿಟಿಸಿಎಲ್ನ ಪ್ರಧಾನ ಕಚೇರಿ ಇಂಧನ ಭವನದ 12ನೇ ಮಹಡಿಯಿಂದಹಾರಿ ಗ್ರೂಪ್ ಸಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಜಯನಗರ ನಿವಾಸಿ ವಜ್ರಕುಮಾರ್ (48) ಎಂದು ಗುರುತಿಸಲಾಗಿದೆ.
ಕೆಪಿಟಿಸಿಎಲ್ನ ಗ್ರಾಚ್ಯುಟಿ ವಿಭಾಗದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಜ್ರಕುಮಾರ್, ಗುರುವಾರ ಸಂಜೆ 5 ಗಂಟೆ ಸುಮಾರಿಗೆ 12ನೇ ಮಹಡಿಯಿಂದ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಜ್ರಕುಮಾರ್ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಅಲ್ಲದೆ, ಅವರು ತೀವ್ರ ಕೌಟುಂಬಿಕ ಕಲಹ ಎದುರಿಸುತ್ತಿದ್ದು, ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






