ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು: ಖಾತೆ ಮಾಡಿಕೊಡಲು 70ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಜತ್ತಪ್ಪ ಎಂಬಾತನನ್ನು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಎಚ್.ಎಂ.ಪ್ರಕಾಶ್ ಎಂಬುವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ದೂರುದಾರ ಪ್ರಕಾಶ್ ಮೃತ ಸಹೋದರನ ಮಗಳ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ 2ಲಕ್ಷ ರೂ.ಗೆ ಬೇಡಿಕೆ ಇಟ್ಟು ಸ್ವೀಕರಿಸಿದ್ದರು. ನಂತರ 10ಸಾವಿರ ರೂ. ಪಡೆದುಕೊಂಡಿದ್ದರು. ಈಗ 70ಸಾವಿರ ರೂ.ಲಂಚ ಪಡೆಯುತ್ತಿದ್ದಾಗ ಪೊಲೀಸರಿಗೆ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story