Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಮಾಂಸಕ್ಕಾಗಿ ಜಿಂಕೆ, ಹಂದಿಗಳ...

ಬೆಂಗಳೂರು | ಮಾಂಸಕ್ಕಾಗಿ ಜಿಂಕೆ, ಹಂದಿಗಳ ಕೊಲ್ಲುತ್ತಿದ್ದ ಓರ್ವನ ಸೆರೆ; ಮೂವರಿಗೆ ಶೋಧ

9 ಜಿಂಕೆ, 1 ಕಾಡು ಹಂದಿಯ 74 ಕೆ.ಜಿ. ಮಾಂಸ, 2 ಬಂದೂಕುಗಳು ವಶ

ವಾರ್ತಾಭಾರತಿವಾರ್ತಾಭಾರತಿ29 Jun 2025 8:59 PM IST
share
ಬೆಂಗಳೂರು | ಮಾಂಸಕ್ಕಾಗಿ ಜಿಂಕೆ, ಹಂದಿಗಳ ಕೊಲ್ಲುತ್ತಿದ್ದ ಓರ್ವನ ಸೆರೆ; ಮೂವರಿಗೆ ಶೋಧ

ಬೆಂಗಳೂರು : ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡವು ಬನ್ನೇರುಘಟ್ಟ ರಸ್ತೆಯಲ್ಲಿ ರವಿವಾರ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಒಟ್ಟು 9 ಜಿಂಕೆ ಹಾಗೂ ಒಂದು ಕಾಡು ಹಂದಿಯ ಸುಮಾರು 74 ಕೆ.ಜಿ. ಜಿಂಕೆ ಮಾಂಸ, 2 ಕಾರು, ಒಂದು ದ್ವಿಚಕ್ರ ವಾಹನ ಹಾಗೂ 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರತಾಪ್(31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡಲಾಗುದೆ ಎಂಬ ಖಚಿತ ಮಾಹಿತಿ ಆಧರಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅರಣ್ಯ ಅಧಿಕಾರಿಗಳು ಮತ್ತು ಜಾಗೃತ ದಳದ ಜಂಟಿ ತಂಡ ಬನ್ನೇರುಘಟ್ಟದ ನೈಸ್ ರಸ್ತೆ ಜಂಕ್ಷನ್ ಬಳಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ, ಕಾರಿನಲ್ಲಿ 4 ಸತ್ತ ಚುಕ್ಕೆ ಜಿಂಕೆ ಮತ್ತು ಒಂದು ಮೃತ ಕಾಡು ಹಂದಿ ಮೃತದೇಹವನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಬಂಧಿತ ಆರೋಪಿಯ ವಿಚಾರಣೆ ವೇಳೆ ಸಿ.ಕೆ.ಪಾಳ್ಯದ ಶೆಡ್‍ನಲ್ಲಿ ಮತ್ತಷ್ಟು ಜಿಂಕೆಗಳ ಮೃತದೇಹ ಮತ್ತು ಮಾಂಸವಿರುವ ವಿಷಯ ತಿಳಿದು, ಅಧಿಕಾರಿಗಳು ದಾಳಿ ಮಾಡಿ, ದ್ವಿಚಕ್ರ ವಾಹನ ಮತ್ತು ಮತ್ತೊಂದು ಇಂಡಿಕಾ ಕಾರನ್ನೂ ವಶಪಡಿಸಿಕೊಂಡು ಒಟ್ಟು 9 ಜಿಂಕೆ ಹಾಗೂ ಒಂದು ಕಾಡು ಹಂದಿಯ ಸುಮಾರು 74 ಕೆ.ಜಿ. ಜಿಂಕೆ ಮಾಂಸ, 1 ಡಬಲ್ ಬ್ಯಾರೆಲ್ ಗನ್, 1 ಸಿಂಗಲ್ ಬ್ಯಾರೆಲ್ ಗನ್ ವಶಕ್ಕೆ ಪಡೆದಿದ್ದಾರೆ.

ಜಿಂಕೆ ಮಾಂಸ ಇಟ್ಟಿದ್ದ ಶೆಡ್ ಮಾಲಕ ಭೀಮಪ್ಪ, ಆರೋಪಿಗಳಾದ ಬಾಲರಾಜು ಹಾಗೂ ರಮೇಶ್ ಎಂಬುವವರು ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ.

ಸಚಿವರ ಅಭಿನಂದನೆ: ಮಾಹಿತಿ ದೊರೆತ ಕೂಡಲೇ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ ಜಿಂಕೆ ಹಂತಕರ ಜಾಲ ಭೇದಿಸಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಅವರ ತಂಡವನ್ನು ಸಚಿವ ಈಶ್ವರ್ ಖಂಡ್ರೆ ಅಭಿನಂದಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X