Bengaluru | ಶೂಟೌಟ್ ಆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರು : ಬೆಂಗಳೂರಿನ ಖಾಸಗಿ ಲೇಔಟ್ ಒಂದರಲ್ಲಿ ಕಾರಿನಲ್ಲಿ ಶೂಟೌಟ್ ಆದ ರೀತಿಯಲ್ಲಿ ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಂಚಪನಹಳ್ಳಿಯ ಬಳಿ ಖಾಸಗಿ ಲೇಔಟ್ ನಲ್ಲಿ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿರ್ಜನ ಪ್ರದೇಶದ ಲೇಔಟ್ ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕಾರಿನ ಬಳಿ ಬುಲೆಟ್ ಕೂಡ ಪತ್ತೆಯಾಗಿದೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಮೃತ ವ್ಯಕ್ತಿ ಯಾರು ಎಂಬ ಬಗ್ಗೆಯೂ ಪೊಲೀಸರಿಂದ ತೀವ್ರ ತನಿಖೆ ನಡೆಯುತ್ತಿದೆ
Next Story




