ಬೆಂಗಳೂರು: ಠಾಣೆಯೆದುರು ಪ್ರತಿಭಟನೆ ನಿರತ ಶಾಸಕ ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು, ಜ.4: ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರನ್ನು ನಗರದ ಸದಾಶಿವ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುನೀಲ್ ಕುಮಾರ್ ಇಂದು ಬೆಳಗ್ಗೆ 'ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂಬ ಫ್ಲಕಾರ್ಡ್ ಹಿಡಿದು ಸದಾಶಿವ ನಗರ ಪೊಲೀಸ್ ಠಾಣೆ ಎದುರು ಬೆಳಗ್ಗೆ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದರು. ಮಾಜಿ ಸಚಿವರೂ ಆಗಿರುವ ಸುನೀಲ್ ಕುಮಾರ್ ಅವರು ಈ ಸಂದರ್ಭ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದರು.
Next Story







