Bengaluru | ಅಪ್ಪನ ಮೇಲಿನ ಹಲ್ಲೆಗೆ ಪ್ರತೀಕಾರ : ವ್ಯಕ್ತಿಯ ಹತ್ಯೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ತನ್ನ ತಂದೆಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಮಗನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಹಲ್ಲೆಗೊಳಗಾಗಿದ್ದ ನಾರಾಯಣಸ್ವಾಮಿ(55) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಆರೋಪಿ ಅಜಯ್ ಎಂಬಾತನನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ನವೆಂಬರ್ 11ರಂದು ಅಜಯ್ ತಂದೆ ಮುನಿವೆಂಕಟಪ್ಪ ಮತ್ತು ನಾರಾಯಣಸ್ವಾಮಿ ಇಬ್ಬರೂ ಕುಡಿದ ಅಮಲಿನಲ್ಲಿ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ನಾರಾಯಣಸ್ವಾಮಿ ತನ್ನ ತಂದೆ ಮೇಲೆ ಹಲ್ಲೆ ಮಾಡಿದ್ದನ್ನು ಕಂಡ ಅಜಯ್ ಆಕ್ರೋಶಗೊಂಡಿದ್ದ. ಅದರ ಪ್ರತೀಕಾರವಾಗಿ ನಾರಾಯಣಸ್ವಾಮಿಗೆ ತೀವ್ರವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಅವರು ನ.16ರಂದು ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿರುವುದಾಗಿ ತಿಳಿದುಬಂದಿದೆ.





