Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: 'ನಮ್ಮ ನಡೆ ಮತಗಟ್ಟೆಯ ಕಡೆ'...

ಬೆಂಗಳೂರು: 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 April 2024 11:01 AM IST
share
ಬೆಂಗಳೂರು: ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಜಾಥಾ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ ಹಮ್ಮಿಕೊಂಡಿದ್ದ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗ, ನಾಗರಿಕರು, ವಿದ್ಯಾರ್ಥಿಗಳು, ಸೈಕಲ್, ಕಾಲ್ನಡಿಗೆ ಮೂಲಕ ನಡೆದ ಜಾಥಾ ಕಾರ್ಯಕ್ರಮದಲ್ಲಿ ಎಲ್.ಇ.ಡಿ. ಪರೆದೆಯುಳ್ಳ ವಾಹನದಲ್ಲಿ ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ರಸ್ತೆಯುದ್ದಕ್ಕೂ ಮತದಾರರಲ್ಲಿ ಎ.26ರಂದು ತಪ್ಪದೇ ಮತದಾನ ಮಾಡಲು ಮನವರಿಕೆ ಮಾಡಿದರು.

ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ ನೀಡುವುದರ ಜೊತೆಗೆ ನೈತಿಕ ಚುನಾವಣೆ ನಡೆಸುವ ಸಂಬಂಧ ಮತದಾರರಿಗಾಗಿ ಹೊರ ತಂದಿರುವ ಸಿ-ವಿಜಿಲ್, ಕೆವೈಸಿ, ಸಕ್ಷಮ್ ತಂತ್ರಾಂಶಗಳು ಸೇರಿದಂತೆ ಮತದಾರರ ಸಹಾಯವಾಣಿ-1950 ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ಹಾಗೂ ಜಾಗೃತಿ ಗೀತೆ:

ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಾಗರಿಕರಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು. ಜೊತೆಗೆ ಮತದಾನದ ಕುರಿತು ಜಾಗೃತಿ ಗೀತೆಯನ್ನು ಹಾಡಲಾಯಿತು.

ಮತಗಟ್ಟೆಗಳ ಬಳಿ ಕನಿಷ್ಠ ಸೌಲಭ್ಯಗಳ ಪರಿಶೀಲನೆ:

ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಏಳು ಮತಗಟ್ಟೆಗಳು ಬರಲಿದ್ದು, ಕನಿಷ್ಠ ಸೌಲಭ್ಯಗಳಿರುವುದನ್ನು ಪರಿಶೀಲಿಸಿ, ಮತದಾನದ ದಿನ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

'ನಮ್ಮ ನಡೆ ಮತಗಟ್ಟೆಯ ಕಡೆ' ಜಾಥಾ ಸಾಗಿದ ಹಾದಿ:

ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ನಿಂದ, ಜಕ್ಕೂರು ಮುಖ್ಯ ರಸ್ತೆ ಮೂಲಕ, ಜಕ್ಕೂರು ವೃತ್ತ, ಶ್ರೀ ಕೆ.ವಿ. ಭೈರೇಗೌಡ ವೃತ್ತ, ಜಕ್ಕೂರಿನ ಸರಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಮತಗಟ್ಟೆಯವರೆಗೂ ಸಾಗಿ ಮತಗಟ್ಟೆಯ ಆವರಣದಲ್ಲಿ 'ಚುನಾವಣಾ ಪರ್ವ ದೇಶದ ಗರ್ವ' ಎಂಬ ದ್ಯೇಯ ಒಳಗೊಂಡಿರುವ ಬಾವುಟವನ್ನು ದ್ವಜಾರೋಹಣ ಮಾಡಲಾಯಿತು.

ನಗರದಾದ್ಯಂತ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾರ್ಯಕ್ರಮ ಆಯೋಜನೆ:

ನಗರದಾದ್ಯಂತ ವಾರ್ಡ್ ವಾರು ಅಪರ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಜಾಥ ನಡೆಸಿ, ಸ್ಥಳೀಯ ಮತಗಟ್ಟೆ ವ್ಯಾಪ್ತಿಯ ಮತದಾರರೊಂದಿಗೆ ಮತದಾನ ಮಾಡುವ ಮತಗಟ್ಟೆಗೆ ಭೇಟಿ ನೀಡಿ ಮತದಾರರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಲಾಯಿತು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಕಾಂತರಾಜು, ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮುಹಮ್ಮದ್ ನಯೀಮ್ ಮೊಮಿನ್, ಉಪ ಆಯುಕ್ತೆ ಮಮತಾ, ಚುನಾವಣಾ ರಾಯಭಾರಿ ನೀತೂ ವನಜಾಕ್ಷಿ ಸಹಿತ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X