ಬೆಂಗಳೂರು: ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ ದಾಳಿ, ಪರಿಶೀಲನೆ

ಬೆಂಗಳೂರು: ಇಂದು ಬೆಳಗ್ಗೆ ಬೆಂಗಳೂರಿನಾದ್ಯಂತ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ರೌಡಿಗಳ ಪ್ರಸಕ್ತ ಕೆಲಸ, ಅವರ ಹಿನ್ನಲೆ ಎಲ್ಲವನ್ನೂ ಪರಿಶೀಲನೆ ಮಾಡಿದ್ದಾರೆ.
ಆಯಾ ವಲಯದ ಕಮಿಷನರ್ ಗಳ ನೇತೃತದಲ್ಲಿ ಕಾರ್ಯಾಚರಣೆ ನಡೆದಿದೆ. ಯಾವುದೇ ಅಪರಾಧ ಕ್ರಮದಲ್ಲಿ ಭಾಗಿಯಾದರೂ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುವುದಾಗಿ ರೌಡಿಶೀಟರ್ ಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಪೊಲೀಸ್ ಇಲಾಖೆಯ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾವುದೇ ಕಾರಣಕ್ಕೂ ಸಮಾಜಘಾತುಕ ಚಟುವಟಿಕೆ ಇರಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಹೊಸ ಚೀಫ್ ಕಮೀಷನರ್ ಹಿತೇಂದ್ರ ಸೂಚನೆಯಂತೆ ದಾಳಿ ನಡೆದಿದ್ದು. ಪರಿಶೀಲನೆ ನಡೆಸುತ್ತಿದ್ದಾರೆ.
Next Story




