Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ...

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ26 Feb 2026 3:58 PM IST
share
ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಸಚಿವ ಈಶ್ವರ ಖಂಡ್ರೆ
"ಬೆಂಗಳೂರು ನಗರ ಮಾಲಿನ್ಯದ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ"

ಬೆಂಗಳೂರು, ಫೆ.26: ರಾಷ್ಟ್ರ ರಾಜಧಾನಿ ದಿಲ್ಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ರಾಜಾಜಿ ನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ

ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

ಉಪ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಕೆಲವೇ ದಶಕಗಳ ಹಿಂದೆ ನಿವೃತ್ತರ ಸ್ವರ್ಗ, ಹವಾನಿಯಂತ್ರಿತ ನಗರ ಎಂದು ಖ್ಯಾತಿ ಪಡೆದಿದ್ದು ಉದ್ಯಾನ ನಗರಿ ಬೆಂಗಳೂರಿನಲ್ಲೂ ಇಂದು ಬಿಸಿಲ ಬೇಗೆ ಹೆಚ್ಚುತ್ತಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣವಾಗಿದ್ದರೂ, ನಗರದ ಹಸಿರು ಹೊದಿಕೆ ಹೆಚ್ಚಿಸಿ ನಗರದ ವಾಯು ಗುಣಮಟ್ಟ ರಕ್ಷಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಏಕ ಬಳಕೆ ಪ್ಲಾಸ್ಟಿಕ್: ಜನಜಾಗೃತಿಯೊಂದೇ ಮಾರ್ಗ:

ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ಬೆಂಗಳೂರಿನಲ್ಲಿ ವಿಪರೀತವಾಗಿದ್ದು, ಇದರ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಜಾಗೃತ ದಳ ರಚಿಸಿ ಕ್ರಮ ವಹಿಸಿ ಎಂದು ಸೂಚಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎಷ್ಟು ತ್ಯಾಜ್ಯ ಶುದ್ಧೀಕರಣ ಘಟಕಗಳಿವೆ. ಅವುಗಳ ಪೈಕಿ ಎಷ್ಟು ಕಾರ್ಯನಿರ್ವಹಿಸುತ್ತಿದೆ. ಅವುಗಳ ಸ್ಥಾಪಿತ ಸಾಮರ್ಥ್ಯ ಎಷ್ಟು ಮತ್ತು ಪ್ರಸ್ತುತ ಎಷ್ಟು ಎಂ.ಎಲ್.ಡಿ. ದ್ರವ ತ್ಯಾಜ್ಯ ಸಂಸ್ಕರಣೆ ಆಗುತ್ತಿದೆ. ಎಷ್ಟು ಎಂ.ಎಲ್.ಡಿ. ನೀರು ಸಂಸ್ಕರಣೆ ಆಗದೆ ಜಲ ಮೂಲ ಸೇರುತ್ತಿದೆ ಎಂಬ ಬಗ್ಗೆ ಪರಿಸರಹ ಇಲಾಖೆಯಿಂದ ಖುದ್ದು ಪರಿಶೀಲನೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು.

ಪರಿಸರ ಇಲಾಖೆಯಿಂದ ನಗರದಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಲ ಕಾಯಿದೆ, ವಾಯು ಕಾಯಿದೆ ಅಡಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಶಾಸಕ ಸುರೇಶ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಮತ್ತಿತರರು ಪಾಲ್ಗೊಂಡಿದ್ದರು.

Tags

Eshwar KhandrePollution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X