Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಹಾಲಿನ ದರ ಏರಿಕೆ...

Bengaluru | ಹಾಲಿನ ದರ ಏರಿಕೆ ಹಿಂಪಡೆಯಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ31 Oct 2026 10:03 PM IST
share
Bengaluru | ಹಾಲಿನ ದರ ಏರಿಕೆ ಹಿಂಪಡೆಯಲು ಆಗ್ರಹಿಸಿ ಧರಣಿ

ಬೆಂಗಳೂರು : ನಂದಿನಿ ಹಾಲಿನ ಪ್ರತಿ ಲೀಟರ್ ಗೆ 8 ರೂ.ದರ ಏರಿಕೆ ಮಾಡಿರುವ ಸರಕಾರದ ನಿರ್ಧಾರವನ್ನು ಖಂಡಿಸಿ, ಹಾಲಿನ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಹೈನುಗಾರರ ಸಮಸ್ಯೆಗಳಿಗೆ ಪರ್ಯಾಯ ಪರಿಹಾರ ಕಂಡುಕೊಳ್ಳಬೇಕು ಆಗ್ರಹಿಸಿ ಎಸ್‍ಯುಸಿಐ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಪದಾಧಿಕಾರಿ ಜಯಣ್ಣ, ಹತ್ತು ವರ್ಷಗಳಲ್ಲಿ ಸರಕಾರ ಕನಿಷ್ಠ ಏಳು ಬಾರಿ ಹಾಲಿನ ದರ ಹೆಚ್ಚಿಸಿದ್ದು, ಈ ಬಾರಿಯ ಏರಿಕೆ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದೆ. ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶ ಸರಕಾರಕ್ಕಿದ್ದರೆ ಬಜೆಟ್‍ನಲ್ಲಿ ಹೈನುಗಾರರಿಗೆ ನೆರವಿಗೆ ಅನುದಾನ ಮೀಸಲಿಡಬೇಕು. ಅದನ್ನು ಬಿಟ್ಟು ರೈತರ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸರಕಾರ ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಸಬ್ಸಿಡಿಗಳಿಗೆ ಕತ್ತರಿ ಹಾಕಿದೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಸಬ್ಸಿಡಿಗಳನ್ನು ಕಡಿತಗೊಳಿಸಿದ್ದೇಕೆ? ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತ್ರಿಯನ್ನೂ ನೀಡುತ್ತಿಲ್ಲ. ಸಣ್ಣ ಪ್ರಮಾಣದ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುವ ಸರಕಾರ, ಮತ್ತೊಂದೆಡೆ ಬಂಡವಾಳಶಾಹಿಗಳ ಕೋಟ್ಯಂತರ ರೂಪಾಯಿ ಸಾಲವನ್ನು ಮನ್ನಾ ಮಾಡುತ್ತಿದೆ. ಇದು ರೈತಪರ ಸರಕಾರವೇ ಎಂದು ಜಯಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಸಮಿತಿ ಸದಸ್ಯೆ ಐಶ್ವರ್ಯ ಸಿ.ಎಂ. ಮಾತನಾಡಿ, ಹಾಲಿನ ದರ ಏರಿಕೆ ಜನಸಾಮಾನ್ಯರ ಮೇಲೆ ಹೊರಿಸಿರುವ ಹಗಲು ದರೋಡೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದರೂ ಜನರ ಆದಾಯದಲ್ಲಿ ಹೆಚ್ಚಳವಾಗಿಲ್ಲ. ಈಗಾಗಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದನ್ನು ತಡೆಗಟ್ಟುವಲ್ಲಿ ಹಾಲು ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಿಸುವುದು ಬಡ ಕುಟುಂಬಗಳ ಮಕ್ಕಳ ಪೌಷ್ಟಿಕ ಆಹಾರದ ಮೇಲೆಯೂ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಹಾಲು ಉತ್ಪಾದನಾ ಮಂಡಳಿಗಳಲ್ಲಿನ ಭ್ರಷ್ಟಾಚಾರ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕಲು ವಿಫಲವಾಗಿರುವ ಸರಕಾರ, ನಷ್ಟದ ನೆಪದಲ್ಲಿ ಗ್ರಾಹಕರ ಮೇಲೆ ಹೊರೆ ಹೇರುತ್ತಿದೆ. ಹೈನುಗಾರರ ಸಮಸ್ಯೆಗಳನ್ನು ಪರಿಹರಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಐಶ್ವರ್ಯ ಒತ್ತಾಯಿಸಿದರು.

Tags

protestBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X