Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಮಳೆ ಅನಾಹುತಗಳಿಗೆ...

ಬೆಂಗಳೂರಿನಲ್ಲಿ ಮಳೆ ಅನಾಹುತಗಳಿಗೆ ಸರಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್

"ಬ್ರಾಂಡ್ ಬೆಂಗಳೂರು ನಿಜಬಣ್ಣ ಬಯಲು"

ವಾರ್ತಾಭಾರತಿವಾರ್ತಾಭಾರತಿ19 May 2025 6:59 PM IST
share
ಬೆಂಗಳೂರಿನಲ್ಲಿ ಮಳೆ ಅನಾಹುತಗಳಿಗೆ ಸರಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಅನಾಹುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಕ್ಕೆ ತಕ್ಷಣ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರವಿವಾರ ರಾತ್ರಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರಕಾರದ ‘ಬ್ರಾಂಡ್ ಬೆಂಗಳೂರಿ’ನ ನಿಜಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಣೆಗೇಡಿತನದ ಪರಮಾವಧಿ: ಕಳೆದ ಅವಧಿಯಲ್ಲಿ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.

ಪ್ರವಾಹ: ಹೆಬ್ಬಾಳ, ಕೋರಮಂಗಲ ಮತ್ತು ವೃಷಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು-ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು. ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ 1ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಪಮಾನ: ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ?. ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

‘ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್, ಹಿಂದಿನ ಸರಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೇಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ’

-ಆರ್.ಅಶೋಕ್, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X