Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಕಬ್ಬು ಬೆಳೆಗಾರರ ಬೇಡಿಕೆ...

Bengaluru | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

ನ.25ರೊಳಗೆ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸದಿದ್ದರೆ ಹೋರಾಟ: ಬಡಗಲಪುರ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ6 Nov 2026 6:55 PM IST
share
Bengaluru | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

ಬೆಂಗಳೂರು : ರಾಜ್ಯದ ಎಲ್ಲ ಕಬ್ಬು ಬೆಳೆಗಾರರಿಗೆ ಅನ್ವಯವಾಗುವಂತೆ ಉಪ ಉತ್ಪನ್ನಗಳ ಲಾಭಾಂಶವನ್ನು ಪರಿಗಣಿಸಿ ವೈಜ್ಞಾನಿಕವಾಗಿ ಬೆಲೆ ನಿಗದಿಪಡಿಸಬೇಕು. ನ.25ರೊಳಗೆ ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಬೆಳೆಗಾರರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸಕ್ಕರೆ ಸಚಿವರು ಮತ್ತು ಸಕ್ಕರೆ ಅಭಿವೃದ್ಧಿ ಆಯುಕ್ತರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಬ್ಬು ಖರೀದಿ ಮಂಡಳಿಯಲ್ಲಿ ಚರ್ಚಿಸಿ, ನಿಯಮಾನುಸಾರ ಬೆಲೆ ನಿಗದಿಪಡಿಸಬೇಕು ಎಂದರು.

ಎಲ್ಲೋ ಕುಳಿತು ಬೆಲೆ ಘೋಷಣೆ ಮಾಡಿದರೆ ರೈತರಿಗೆ ಹಣ ದೊರೆಯುವುದಿಲ್ಲ. ಸರಕಾರ ಅಧಿಕೃತ ಆದೇಶ ಹೊರಡಿಸಿದರೆ ಮಾತ್ರ ರೈತರಿಗೆ ಕಾನೂನಾತ್ಮಕವಾಗಿ ಪ್ರಶ್ನಿಸುವ ಮತ್ತು ನ್ಯಾಯಕ್ಕಾಗಿ ಹೋರಾಡುವ ಅವಕಾಶ ಸಿಗುತ್ತದೆ. ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗಿ ಕಬ್ಬಿನ ಬೆಲೆ ಘೋಷಿಸುವುದರಿಂದ ರಾಜ್ಯದ ಇತರ ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ. ಇಡೀ ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಏಕರೂಪದ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ, ಸಕ್ಕರೆ ಕಾರ್ಖಾನೆಗಳ ಸಕ್ಕರೆ ಉತ್ಪಾದನೆಯಿಂದ ಮಾತ್ರವಲ್ಲದೆ ಮೊಲಾಸಿಸ್, ಎಥನಾಲ್ ಮತ್ತು ವಿದ್ಯುತ್ ಉತ್ಪಾದನೆಯಿಂದಲೂ ಲಾಭ ಬರುತ್ತದೆ. ಸಕ್ಕರೆಯ ಮಾರುಕಟ್ಟೆ ಬೆಲೆ, ಮೊಲಾಸಿಸ್‍ನ ಬೆಲೆ, ವಿದ್ಯುತ್ ಉತ್ಪಾದನೆಯಿಂದ ಬರುವ ಆದಾಯ ಸೇರಿದಂತೆ ಎಲ್ಲ ಉಪ ಉತ್ಪನ್ನಗಳ ಲಾಭವನ್ನು ಲೆಕ್ಕಾಚಾರಕ್ಕೆ ತೆಗೆದುಕೊಂಡು ರೈತರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಹೇಳಿದರು.

ಕೇವಲ ಎಫ್‍ಆರ್‍ಪಿ ದರವನ್ನು ಹೆಚ್ಚಿಸುವುದರಿಂದ ರೈತರ ಎಲ್ಲ ಸಮಸ್ಯೆಗಳು ಬಗೆಹರಿಯುವುದಿಲ್ಲ. ಸಕ್ಕರೆಯ ವಾಣಿಜ್ಯ ಬಳಕೆ ಮತ್ತು ಗ್ರಾಹಕರ ಬಳಕೆ ಎಂಬ ಎರಡು ವಿಭಾಗಗಳಿಗೆ ಪ್ರತ್ಯೇಕ ಬೆಲೆ ನಿಗದಿಪಡಿಸಬೇಕು. ಅದರಿಂದ ಬರುವ ಹೆಚ್ಚುವರಿ ಲಾಭವನ್ನು ಎಫ್‍ಆರ್‍ಪಿ ಮೂಲಕ ರೈತರಿಗೆ ವರ್ಗಾಯಿಸಬೇಕು. ಎಫ್‍ಆರ್‍ಪಿ ದರವನ್ನು ಹೊಲದಲ್ಲಿನ ಕಬ್ಬಿನ ದರವಾಗಿ ನಿಗದಿಪಡಿಸಿದರೆ ಕಟಾವು ಕೂಲಿ, ಸಾಗಾಣಿಕೆ ವೆಚ್ಚ ಮತ್ತು ತೂಕದಲ್ಲಿನ ವಂಚನೆಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.

ಕಬ್ಬಿನ ಉಪ ಉತ್ಪನ್ನಗಳಿಂದ ಬರುವ ಲಾಭಾಂಶದ ಕನಿಷ್ಠ ಶೇ.50ರಷ್ಟನ್ನು ರೈತರಿಗೆ ವರ್ಗಾಯಿಸಬೇಕು. ಕಬ್ಬಿನ ಎಫ್‍ಆರ್‍ಪಿ ದರ ನಿಗದಿಯಲ್ಲಿ ಸಕ್ಕರೆ ಇಳುವರಿ ಮಾನದಂಡವನ್ನು ಶೇ.10.25ರಿಂದ ಶೇ.9.5ಕ್ಕೆ ಇಳಿಸಬೇಕು. ತಮಿಳುನಾಡು ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ ಸಾವಿರ ರೂ. ಹೆಚ್ಚುವರಿ ಪ್ರೊ ತ್ಸಾಹಧನ ನೀಡಬೇಕು. ಎಥನಾಲ್ ಉತ್ಪಾದನೆ ನೀತಿಯನ್ನು ರೈತಪರವಾಗಿ ಪರಿಷ್ಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಇದರ ಜೊತೆಗೆ, ಬರಪೀಡಿತ 224 ತಾಲೂಕುಗಳ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ರೂ. ಬರ ಪರಿಹಾರ ನೀಡಬೇಕು. ರೈತರ ಹೋರಾಟದ ಸಂದರ್ಭದಲ್ಲಿ ದಾಖಲಿಸಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು. ಕಬ್ಬಿನ ಬಾಕಿ ಹಣವನ್ನು 1966ರ ಕಬ್ಬು ನಿಯಂತ್ರಣ ಕಾಯ್ದೆಯ ಪ್ರಕಾರ 14 ದಿನಗಳೊಳಗೆ ಪಾವತಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶಿವಾನಂದ ಕುಗ್ವೆ, ವೀರಸಂಗಯ್ಯ, ಸಿದ್ದನಗೌಡ ಪಾಟೀಲ್, ಕೆಂಪುಗೌಡರು, ಮುಗುಲಿ ನಾಗೇಂದ್ರಪ್ಪ, ಹೊನ್ನೂರು ಪ್ರಕಾಶ್, ನಂದಿನಿ ಜಯರಾಮ್, ಬಸವರಾಜ್, ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

‘ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರಕಾರ ತಜ್ಞರ ಸಮಿತಿ ರಚಿಸಿದ್ದು, ನ.29ರಂದು ಸಮಿತಿ ರಾಜ್ಯಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಲಿದೆ. ಸಮಿತಿಯ ವರದಿ ಬಂದ ಬಳಿಕ ಸಿಎಂ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಮಿತಿಯೊಂದಿಗೆ ಚರ್ಚಿಸಿದ್ದು, ಸಕ್ಕರೆಯ ಬೆಲೆಯನ್ನು ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದು, ವರದಿ ಶೀಘ್ರ ಸಲ್ಲಿಸುವಂತೆ ಸಮಿತಿಗೆ ಒತ್ತಾಯಿಸಲಾಗಿದೆ. ಬೇಡಿಕೆಗಳ ಕುರಿತು ಮತ್ತೆ ರೈತ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು. 15ರಿಂದ 20 ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು’

-ರುದ್ರಪ್ಪ ಲಮಾಣಿ, ಸಕ್ಕರೆ ಸಚಿವ

Tags

BengaluruSugarcane Farmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X