Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ನವವಿವಾಹಿತೆ ಗಾನವಿ...

Bengaluru | ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು; ನಾಗಪುರದಲ್ಲಿ ಪತಿಯೂ ಆತ್ಮಹತ್ಯೆ!

ವಾರ್ತಾಭಾರತಿವಾರ್ತಾಭಾರತಿ27 Dec 2025 6:41 PM IST
share
Bengaluru | ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು; ನಾಗಪುರದಲ್ಲಿ ಪತಿಯೂ ಆತ್ಮಹತ್ಯೆ!

ಬೆಂಗಳೂರು : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸಾವನ್ನಪ್ಪಿದ ಬಳಿಕ, ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದ ಆಕೆಯ ಪತಿ ಸೂರಜ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗಪುರದಲ್ಲಿ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ತಾಯಿ ಜಯಂತಿ ಸಹ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 29ರಂದು ಗಾನವಿ ಹಾಗೂ ಸೂರಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‍ಗೆಂದು ತೆರಳಿದ್ದ ದಂಪತಿ, ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಡಿ.21ರ ರವಿವಾರ ಮನೆಗೆ ವಾಪಸ್ಸಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದರು. ನಂತರ ಮನೆಯಲ್ಲಿ ಜಗಳವಾದ ಹಿನ್ನೆಲೆಯಲ್ಲಿ, ಗಾನವಿಯನ್ನು ಆಕೆಯ ಪೋಷಕರು ತವರು ಮನೆಗೆ ಕರೆತಂದಿರುವುದಾಗಿ ಹೇಳಿದ್ದರು.

ಬಳಿಕ ಡಿ.24ರ ಬುಧವಾರ ಮಧ್ಯಾಹ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯನ್ನು ಪೋಷಕರು ರಕ್ಷಿಸಿ ರಾಮಮೂರ್ತಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು ಗಾನವಿಯ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದರು. ವೆಂಟಿಲೇಟರ್‍ನಲ್ಲಿ ಇರಿಸಿದ್ದ ಗಾನವಿ ಚಿಕಿತ್ಸೆಗೆ ಸ್ಪಂದಿಸದೆ, ಡಿ.25ರ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಈ ಬಗ್ಗೆ ಸೂರಜ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ಗಾನವಿ ಪೋಷಕರು ದೂರು ನೀಡಿದ್ದರು. ಘಟನೆ ಬೆನ್ನಲ್ಲೇ, ಸೂರಜ್, ಅವರ ತಾಯಿ ಜಯಂತಿ ಮತ್ತು ಸೂರಜ್ ಸಹೋದರ ಸಂಜಯ್ ನಾಗಪುರಕ್ಕೆ ತೆರಳಿದ್ದರು. ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸೂರಜ್ ಸಾವನ್ನಪ್ಪಿದ್ದು, ಅವರ ತಾಯಿ ಜಯಂತಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೂರಜ್ ಡಿ.26ರ ಶುಕ್ರವಾರ ನಾಗಪುರದ ರಾಯಲ್ ವಿಲ್ಲಾದಲ್ಲಿ ಉಳಿದುಕೊಂಡಿದ್ದರು. ಅಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಸೆ ಗಾನವಿ ಆತ್ಮಹತ್ಯೆ ಮಾಡಿಕೊಂಡ ನಂತರ ಮತ್ತು ಆಕೆಯ ಪೋಷಕರು ಇವರ ವಿರುದ್ಧ ದೂರು ದಾಖಲಿಸಿದ ಹಿನ್ನೆಲೆಯಲ್ಲಿ, ಇವರಿಬ್ಬರೂ ಭಯಭೀತರಾಗಿದ್ದರು. ಆ ಕಾರಣಕ್ಕಾಗಿಯೇ ಅವರು ನಾಗಪುರಕ್ಕೆ ಬಂದು ತಂಗಿದ್ದರು.

-ನಿತಿನ್ ಮಗರ್, ಇನ್‍ಸ್ಪೆಕ್ಟರ್, ಸೋನೆಗಾಂವ್ ಪೊಲೀಸ್ ಠಾಣೆ, ನಾಗಪುರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X