ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಎನ್ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ(ಎನ್ಡಿಎ) ಅಭ್ಯರ್ಥಿ ಎ.ಪಿ.ರಂಗನಾಥ್ ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡರು ಉಪಸ್ಥಿತರಿದ್ದರು.
Next Story