Bengaluru | ಹದಿನಾರನೇ ಮಹಡಿಯಿಂದ ಕೆಳಗೆ ಬಿದ್ದು ಟೆಕ್ಕಿ ಮೃತ್ಯು

ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆಯ ಖಾಸಗಿ ಅಪಾರ್ಟ್‍ಮೆಂಟ್‍ವೊಂದರ 16ನೇ ಮಹಡಿಯಿಂದ ಕೆಳಗೆ ಬಿದ್ದು ಟೆಕ್ಕಿಯೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ನಿಕ್ಷೇಪ್(26) ಮೃತಪಟ್ಟ ಟೆಕ್ಕಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆಯ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದ ನಿಕ್ಷೇಪ್ ಅವರು ಮನೆಯಿಂದಲೇ ಕೆಲಸ (ವರ್ಕ್ ಫ್ರಂ ಹೋಮ್) ಮಾಡುತ್ತಿದ್ದರು. ಇವರು ಬಹುದಿನಗಳಿಂದ ಮಾಸಿಕ ಖಿನ್ನತೆ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಗ್ಗೆ ಅಪಾರ್ಟ್‍ಮೆಂಟ್‍ನ 16ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story





