Bengaluru | ಟೇಕ್ಆಫ್ಗೆ ಸಿದ್ಧವಾಗುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಮಧುರೈಗೆ ಹೊರಟಿದ್ದ ವಿಮಾನದಲ್ಲಿ ಸಮಸ್ಯೆ

ಸಾಂದರ್ಭಿಕ ಚಿತ್ರ | PC : Image by onlyyouqj on Magnific
ಬೆಂಗಳೂರು : ಸೋಮವಾರ ಬೆಳಿಗ್ಗೆ ಟೇಕ್ಆಫ್ಗೆ ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೈಡ್ರಾಲಿಕ್ ವ್ಯವಸ್ಥೆಗೆ ಸಂಬಂಧಿಸಿದ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನ ದುರಂತವೊಂದು ತಪ್ಪಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತಕ್ಷಣವೇ ಪೈಲಟ್ ವಿಮಾನಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಟೇಕ್-ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ.
ನಂತರ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಿ ಟರ್ಮಿನಲ್ ಕಟ್ಟಡಕ್ಕೆ ಕಳುಹಿಸಲಾಯಿತು. ಬಳಿಕ ಪ್ರಯಾಣಿಕರಿಗೆ ಬದಲಿ ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಮಾನವು ಮಧುರೈನತ್ತ ಪ್ರಯಾಣ ಬೆಳೆಸಿತು.
Next Story




