Bengaluru | ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ

ನಂದಿನಿ
ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ಸೋಮವಾರ ವರದಿಯಾಗಿದೆ.
ಇವರು ಮೂಲತಃ ಕೊಟ್ಟೂರಿನವರಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು. ತಮ್ಮ ನಿವಾಸದಲ್ಲೇ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ಕನ್ನಡದ ‘ಜೀವ ಹೂವಾಗಿದೆ’, ‘ಸಂಘರ್ಷ’, ‘ಮಧುಮಗಳು’, ‘ನೀನಾದೆ ನಾ’ ಧಾರಾವಾಹಿಗಳಲ್ಲಿ ನಂದಿನಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಮೆಚ್ಚುಗೆ ಪಡೆದುಕೊಂಡಿದ್ದರು. ಅಲ್ಲದೆ, ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
Next Story





