Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಮೂರು ದಿನಗಳ ಕೃಷಿ ಮೇಳಕ್ಕೆ...

Bengaluru | ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Nov 2026 11:30 PM IST
share
Bengaluru | ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಜಿಕೆವಿಕೆ ಆವರಣದಲ್ಲಿ ಬರ ನಿರ್ವಹಣೆ ತಂತ್ರಜ್ಞಾನಗಳು ಹಾಗೂ ಕೃಷಿ ನಾವಿನ್ಯತೆಗಳನ್ನು ಪರಿಚಯಿಸುವ ಮೂರು ದಿನಗಳ ಸರಳ ಕೃಷಿ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಗಿದ್ದು, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ವೈವಿದ್ಯಮಯ ಬೆಳೆ ಸಂಗ್ರಹಾಲಯವನ್ನು ಬಿಡುಗಡೆಗೊಳಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವ ಪಿ.ಎಂ.ನರೇಂದ್ರಸ್ವಾಮಿ ರೈತರ ಅಭಿವೃದ್ಧಿಯೇ ರಾಜ್ಯದ ಮತ್ತು ದೇಶದ ಅಭಿವೃದ್ಧಿಗೆ ಅಡಿಪಾಯವಾಗಿದೆ. ಕೃಷಿ ಎಂದರೆ ಕೇವಲ ಒಂದು ಉದ್ಯೋಗವಲ್ಲ. ಅದು ನಮ್ಮ ಸಂಸ್ಕೃ ತಿ, ನಮ್ಮ ಜೀವನ ಪದ್ಧತಿ ಮತ್ತು ನಮ್ಮ ಆರ್ಥಿಕತೆಯ ಜೀವನಾಡಿಯಾಗಿದೆ ಎಂದು ಹೇಳಿದರು.

ಇಂದು ರಾಜ್ಯದ ಕೃಷಿ ಕ್ಷೇತ್ರವು ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಮಳೆಯ ಅನಿಶ್ಚಿತತೆ, ಮುಂಗಾರು ಮಳೆಯ ಕೊರತೆ, ದೀರ್ಘಕಾಲದ ಒಣ ಹವೆ, ಹೆಚ್ಚುತ್ತಿರುವ ತಾಪಮಾನ ಹಾಗೂ ಅಂತರ್ಜಲ ಮಟ್ಟ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಪ್ರದೇಶಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸರಿಯಾಗಿ ಬೆಳೆಯದೇ ಒಣಗುತ್ತಿವೆ. ಕೆರೆ-ಕಟ್ಟೆಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ ಎಂದು ತಿಳಿಸಿದರು.

ಬರಗಾಲದ ಸಂದರ್ಭದಲ್ಲಿ ರೈತರಿಗೆ ಅಗತ್ಯವಾದ ಪರಿಹಾರ ಒದಗಿಸುವುದು ಪ್ರತಿ ಎಕರೆಗೆ 5 ಸಾವಿರ ರೂ. ವರೆಗೂ, ಬೆಳೆ ವಿಮೆ ಸೌಲಭ್ಯ ತಲುಪಿಸುವುದು. ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಬರಗಾಲ ಸಂದರ್ಭದಲ್ಲಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸದೇ, ಸರಕಾರ ರೈತರ ಬೆನ್ನಿಗೆ ನಿಲ್ಲುವ ಕಾರ್ಯ ಮಾಡುತ್ತಿದೆ ಎಂದರು.

ನಮ್ಮ ಸಂಶೋಧನೆಗಳು ಪ್ರಯೋಗಾಲಯಗಳಿಗೆ ಮಾತ್ರ ಸೀಮಿತವಾಗಬಾರದು. ಅವು ರೈತರ ಹೊಲಗಳಿಗೆ ತಲುಪಬೇಕು. ಹೊಸ ತಳಿಗಳ ಗುಣ ಲಕ್ಷಣಗಳು, ಬಿತ್ತನೆ ವಿಧಾನ, ಗೊಬ್ಬರ ನಿರ್ವಹಣೆ ಮತ್ತು ಇಳುವರಿ ಸಾಮಥ್ರ್ಯದ ಕುರಿತು ರೈತರಿಗೆ ಸೂಕ್ತ ತರಬೇತಿ ನೀಡಬೇಕು. ಕರ್ನಾಟಕದ ಹೆಚ್ಚಿನ ಕೃಷಿ ಪ್ರದೇಶ ಮಳೆಯಾಶ್ರಿತವಾಗಿದೆ. ಇಂತಹ ಪ್ರದೇಶಗಳಲ್ಲಿ ಕೃಷಿಯನ್ನು ಲಾಭದಾಯಕವಾಗಿಸಲು ಒಣಭೂಮಿ ಕೃಷಿ ಪದ್ಧತಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕೃಷಿ ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹಾಗೂ ದೇಶದ ವಿವಿಧ ಕೃಷಿ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿರುವ ಅಧಿಕ ಇಳುವರಿ ನೀಡುವ ಸುಧಾರಿತ ತಳಿಗಳು, ನೂತನ ಕೃಷಿ ತಂತ್ರಜ್ಞಾನಗಳು ಮತ್ತು ವೈಜ್ಞಾನಿಕ ಬೇಸಾಯ ಪದ್ಧತಿಗಳು ರೈತರ ಹೊಲಗಳನ್ನು ತಲುಪಿದ್ದು, ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಸಚಿವ ಕೃಷ್ಣ ಬೈರೇಗೌಡ, ಶಾಸಕ ಎಸ್.ಆರ್.ವಿಶ್ವನಾಥ್, ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್‍ಚಂದ್ರ, ಕೃಷಿ ವಿವಿ ಕುಲಪತಿ ಡಾ.ಪಿ.ವೆಂಕಟರವಣ ಮತ್ತಿತರರು ಉಪಸ್ಥಿತದ್ದರು.

ವಿವಿಧ ಪ್ರಶಸ್ತಿ ಪ್ರದಾನ: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ರೈತರಾದ ಪೂರ್ಣಚಂದ್ರಗೆ, ಡಾ. ಎಂ.ಎಚ್.ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿಯನ್ನು ಬಿ.ಶ್ರೀಕಾಂತ್‍ಗೆ, ಕ್ಯಾನ್ ಬ್ಯಾಂಕ್ ರಾಜ್ಯಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಯನ್ನು ಎಚ್.ಪಿ.ರೂಪಗೆ, ಕ್ಯಾನ್ ಬ್ಯಾಂಕ್ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ಸಿ.ಆರ್.ರಾಧಕೃಷ್ಣಗೆ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ ಟಿ.ಎನ್.ಯೋಗಾನಂದಮೂರ್ತಿಗೆ, ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಯನ್ನು ವಿಸ್ತರಣಾ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರಿಗೆ ಹಾಗೂ ಅನೇಕ ರೈತರಿಗೆ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Tags

Bengaluruagriculture
share
ವಾರ್ತಾಭಾರತಿ
ವಾರ್ತಾಭಾರತಿ
Next Story
X