Bengaluru | ಈಜುಕೊಳದಲ್ಲಿ ವಿದ್ಯುತ್ ಅವಘಡ: ಇಬ್ಬರು ವಿದೇಶಿಗರು ಮೃತ್ಯು

ಸಾಂದರ್ಭಿಕ ಚಿತ್ರ | Photo credit : AI
ಬೆಂಗಳೂರು : ಹಲಸೂರು ಬಳಿಯಿರುವ ಕಾನ್ರಾಡ್ ಹೋಟೆಲ್ನ ಈಜುಕೊಳದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದ ಇಬ್ಬರು ವಿದೇಶಿ ಪ್ರವಾಸಿಗರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತರನ್ನು ಸ್ಲೋವಾಕಿಯಾ ಮೂಲದ ಓರಿಯಾಟ್ (45) ಹಾಗೂ ನೆದರ್ಲ್ಯಾಂಡ್ಸ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ.
ಹೋಟೆಲ್ನ ಮೂರನೇ ಮಹಡಿಯಲ್ಲಿರುವ ಈಜುಕೊಳದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈಜುಕೊಳದ ನೀರೊಳಗಿನ ದೀಪಗಳನ್ನು ಆನ್ ಮಾಡಿದ ಸಂದರ್ಭದಲ್ಲಿ ವಿದ್ಯುತ್ ನೀರಿಗೆ ಪ್ರವಹಿಸಿರಬಹುದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈಜುಕೊಳದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ನೀರಿನಲ್ಲಿದ್ದ ಇಬ್ಬರು ವಿದೇಶಿ ಪ್ರವಾಸಿಗರು ಮೃತಪಟ್ಟಿದ್ದಾರೆ.
ಪ್ರವಾಸಿಗರು ವಿದ್ಯುತ್ ಅವಘಡಕ್ಕೆ ಒಳಗಾಗಿರುವುದನ್ನು ಗಮನಿಸಿದ ಅಮೆರಿಕ ಮೂಲದ ವ್ಯಕ್ತಿಯೊಬ್ಬರು ಹಾಗೂ ಈಜುಕೊಳದ ಅಟೆಂಡರ್ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರಕ್ಷಣೆ ಕಾರ್ಯಾಚರಣೆ ವೇಳೆ ಅವರಿಗೂ ವಿದ್ಯುತ್ ಪ್ರವಹಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುವ ಮೂಲಕ ರಕ್ಷಿಸಲಾಗಿದೆ ಎಂದು ತಿಳಿದು ಬMದಿದೆ.




