ಬೆಂಗಳೂರು | ಮಹಿಳೆಯ ಕೊಲೆ : ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣ ದರೋಡೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಒಂಟಿ ಮಹಿಳೆಯನ್ನು ಕೊಲೆ ಮಾಡಿ ಅಂದಾಜು ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಇಲ್ಲಿನ ಕಾಟನ್ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ವರದಿಯಾಗಿದೆ.
ಲತಾ(40) ಎಂಬಾಕೆ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಲತಾ ಅವರನ್ನು ಆರೋಪಿಗಳು ಹತ್ಯೆಗೈದು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಕಾಟನ್ ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.
Next Story





