Bengaluru | ವೈರಲ್ ವೀಡಿಯೊದಲ್ಲಿರುವ ಮಹಿಳಾ ಪೊಲೀಸ್ ಅಧಿಕಾರಿಯಿಂದ ದೂರು

ಬೆಂಗಳೂರು : ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವೀಡಿಯೊ ಕರೆ ಮೂಲಕ ಅಸಭ್ಯವಾಗಿ ವರ್ತಿಸಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ವೀಡಿಯೊದಲ್ಲಿರುವ ಪೊಲೀಸ್ ಅಧಿಕಾರಿಯು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೆಲ ವರ್ಷಗಳ ಹಿಂದೆ ರೌಡಿಶೀಟರ್ ಧರ್ಮ ಎಂಬವರ ಜೊತೆ ಆತ್ಮೀಯವಾಗಿದ್ದರು. ವೀಡಿಯೊ ಕರೆಯಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ನಂತರ ವೀಡಿಯೊವನ್ನು ಮತ್ತೊಬ್ಬ ರೌಡಿಶೀಟರ್ ಸಾಯಿಕುಮಾರ್ ಅವರಿಗೆ ಕೊಟ್ಟು ವೈರಲ್ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಯು ದೂರಿನಲ್ಲಿ ಉಲ್ಲೇಖಸಿದ್ದಾರೆ
Next Story




