Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗಣೇಶೋತ್ಸವ’ ತಾತ್ಕಾಲಿಕ ವಿದ್ಯುತ್...

‘ಗಣೇಶೋತ್ಸವ’ ತಾತ್ಕಾಲಿಕ ವಿದ್ಯುತ್ ಸಂಪರ್ಕ | ಮೆರವಣಿಗೆ-ವಿಸರ್ಜನೆ ವೇಳೆ ನಿಯಮ ಪಾಲನೆ ಕಡ್ಡಾಯ : ಬೆಸ್ಕಾಂ

ವಾರ್ತಾಭಾರತಿವಾರ್ತಾಭಾರತಿ4 Sept 2024 8:15 PM IST
share
‘ಗಣೇಶೋತ್ಸವ’ ತಾತ್ಕಾಲಿಕ ವಿದ್ಯುತ್ ಸಂಪರ್ಕ | ಮೆರವಣಿಗೆ-ವಿಸರ್ಜನೆ ವೇಳೆ ನಿಯಮ ಪಾಲನೆ ಕಡ್ಡಾಯ : ಬೆಸ್ಕಾಂ

ಬೆಂಗಳೂರು : ‘ಗಣೇಶ ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ಸಹಕಾರ ನೀಡಲಿದೆ. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್ ಅವಘಡಗಳಾಗದಂತೆ ಎಚ್ಚರವಹಿಸಬೇಕು’ ಎಂದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ.

ಬುಧವಾರ ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೆ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಸುರಕ್ಷತಾ ಕ್ರಮಗಳು: ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‍ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. ಸೀರಿಯಲ್ ಲೈಟ್, ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯದಿರಿ. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.

ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು. ತುಂಡಾದ ವೈರ್, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್’ ಎಂದು ಸೂಚಿಸಬೇಕು.

ತಾತ್ಕಲಿಕ ಸಂಪರ್ಕದ ಮಾಹಿತಿ: ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು. ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.

ವೈರಿಂಗ್ ಸುರಕ್ಷತೆ, ಎಂಸಿಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು. ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X