Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗೃಹಜ್ಯೋತಿ’ ಬಾಡಿಗೆದಾರರು ಆತಂಕ...

‘ಗೃಹಜ್ಯೋತಿ’ ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ : ಬೆಸ್ಕಾಂ

ವಾರ್ತಾಭಾರತಿವಾರ್ತಾಭಾರತಿ5 July 2026 11:01 PM IST
share
‘ಗೃಹಜ್ಯೋತಿ’ ಬಾಡಿಗೆದಾರರು ಆತಂಕ ಪಡಬೇಕಾಗಿಲ್ಲ : ಬೆಸ್ಕಾಂ

ಬೆಂಗಳೂರು : ‘ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಆರಂಭಗೊಂಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್‍ಡೆಟ್ ಕುರಿತು ಯಾವುದೇ ಕಾರಣಕ್ಕೂ ಗೊಂದಲ ಪಡಬೇಕಾಗಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್‍ಡೆಟ್ ಮಾಡಿಕೊಳ್ಳಲಾಗುವುದು. ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.

ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ? ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ. ಸಮೀಕ್ಷೆ ವೇಳೆ ಹಳೆಯ ಬಾಡಿಗೆದಾರರ ಆಧಾರ್ ಕಾರ್ಡ್ ಮತ್ತು ವಿವರಗಳನ್ನು ತೆಗೆದುಹಾಕಿ, ಹೊಸ ಬಾಡಿಗೆದಾರರ ಆಧಾರ್ ಸಂಖ್ಯೆ ನಮೂದು ಮಾಡಿಕೊಳ್ಳಲಾಗುವುದು. ಹೀಗಾಗಿ ಗೃಹಜ್ಯೋತಿ ಯೋಜನೆಯ ಸೌಲಭ್ಯ ನಿಲ್ಲುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಯಾವುದೇ ಕಚೇರಿಗೆ ಹೋಗಬೇಕಾದ ಅಗತ್ಯವಿಲ್ಲ. ಬೆಸ್ಕಾಂ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆಯ ಸಮಯದಲ್ಲಿ ನಿಮ್ಮ ಆಧಾರ್ ಮತ್ತು ಬಾಡಿಗೆ/ಲೀಸ್ ಕರಾರು ವಿವರಗಳನ್ನು ಅಪ್‍ಡೇಟ್ ಮಾಡಲಿದ್ದಾರೆ.

ಈ ಪ್ರಕ್ರಿಯೆ ಕೇವಲ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದುದರಿಂದ ಬಾಡಿಗೆದಾರರು ಆತಂಕವಿಲ್ಲದೆ ಬೆಸ್ಕಾಂ ತಂಡಕ್ಕೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು. ಜೊತೆಗೆ ಮನೆ ಮಾಲಕರು ತಮ್ಮ ಬಾಡಿಗೆದಾರರಿಗೆ ಈ ಪ್ರಕ್ರಿಯೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಬೆಂಬಲಿಸಬೇಕು ಎಂದು ಕೋರಿದೆ.

ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ-ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ/ಸಂದೇಶ ಕಳುಹಿಸಬಹುದು. ಬೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ವಿಶೇಷ ವಾಟ್ಸಾಪ್ ಸಂಖ್ಯೆಗಳು: 94808 16111, 94808 16112, 94808 16113, 94808 16114 ಅನ್ನು (ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆಯ ವರೆಗೆ ಲಭ್ಯವಿರುತ್ತದೆ) ಸಂಪರ್ಕಿಸಬಹುದಾಗಿದೆ.

Tags

Bescom
share
ವಾರ್ತಾಭಾರತಿ
ವಾರ್ತಾಭಾರತಿ
Next Story
X