Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಟ್ಟಹಲಸೂರು ಗ್ರಾ.ಪಂ : ಒಂದು ದಶಕದ ಪಯಣ...

ಬೆಟ್ಟಹಲಸೂರು ಗ್ರಾ.ಪಂ : ಒಂದು ದಶಕದ ಪಯಣ ಪೂರೈಸಿದ ‘ಇಕೋಗ್ರಾಮ್’ ಯೋಜನೆ

ವಾರ್ತಾಭಾರತಿವಾರ್ತಾಭಾರತಿ10 Oct 2026 11:38 PM IST
share
ಬೆಟ್ಟಹಲಸೂರು ಗ್ರಾ.ಪಂ : ಒಂದು ದಶಕದ ಪಯಣ ಪೂರೈಸಿದ ‘ಇಕೋಗ್ರಾಮ್’ ಯೋಜನೆ

ಬೆಂಗಳೂರು : ದಿ ಅನಾನಿಮಸ್ ಇಂಡಿಯನ್ ಚಾರಿಟೇಬಲ್ ಟ್ರಸ್ಟ್ ನ ಉಪಕ್ರಮವಾದ ಇಕೋಗ್ರಾಮ್ ಯೋಜನೆಯು ಉತ್ತರ ಬೆಂಗಳೂರಿನ ಬೆಟ್ಟಹಲಸೂರು ಗ್ರಾಮ ಪಂಚಾಯಿತಿಯೊಂದಿಗೆ ಸುಸ್ಥಿರ ತ್ಯಾಜ್ಯ, ನೀರು ಮತ್ತು ಮಣ್ಣಿನ ನಿರ್ವಹಣೆಗೆ ಪುನರಾವರ್ತಿಸಬಹುದಾದ ಮಾದರಿಯನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ದಶಕದ ಕಾರ್ಯವನ್ನು ಪೂರ್ಣಗೊಳಿಸಿದೆ.

ಬೆಟ್ಟಹಲಸೂರು ಗ್ರಾಮದ ಇಕೋಹಬ್‍ನಲ್ಲಿ ಆಯೋಜಿಸಲಾಗಿದ್ದ ದಶಕದ ಮೈಲಿಗಲ್ಲು ಕಾರ್ಯಕ್ರಮದಲ್ಲಿ ಮಾತನಾಡಿದ ಟಿಎಐಸಿಟಿ ವ್ಯವಸ್ಥಾಪಕ ಟ್ರಸ್ಟಿ ಮೈರಿಯಂ ಶಂಕರ್, ಮೂಲದಲ್ಲಿಯೆ ತ್ಯಾಜ್ಯ ವಿಂಗಡಣೆಯನ್ನು ಪರಿಚಯಿಸುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಅಗತ್ಯ ಮೂಲಸೌಕರ್ಯ, ಸಿಬ್ಬಂದಿ ಮತ್ತು ಕಾರ್ಯಾಚರಣೆಗಳ ಜೊತೆಗೆ, ಸರಕಾರದ ಪ್ರತಿನಿಧಿಗಳು, ಗ್ರಾಮಸ್ಥರು ಮತ್ತು ವಾಣಿಜ್ಯ ಸಂಸ್ಥೆಗಳೊಂದಿಗೆ ನಿರಂತರವಾಗಿ ತೊಡಗಿಸಿಕೊಳ್ಳಬೇಕಾಯಿತು ಎಂದು ಹೇಳಿದರು.

ಕಳೆದ ಒಂದು ದಶಕದಲ್ಲಿ, ಸ್ಥಳೀಯ ಸಮುದಾಯದ ಸಕ್ರಿಯ ಸಹಭಾಗಿತ್ವದೊಂದಿಗೆ ತ್ಯಾಜ್ಯ ಸಂಗ್ರಹಣೆ, ಸಾಗಣೆ, ದ್ವಿತೀಯ ಹಂತದ ವಿಂಗಡಣೆ ಮತ್ತು ಸಂಸ್ಕರಣೆಯನ್ನು ಒಳಗೊಂಡಿರುವ ಸಂಪೂರ್ಣ ವ್ಯವಸ್ಥೆಯನ್ನು ನಾವು ನಿರ್ಮಿಸಿದ್ದೇವೆ ಎಂದು ಮೈರಿಯಂ ಶಂಕರ್ ತಿಳಿಸಿದರು.

2016ರಲ್ಲಿ ತಾರಹುಣಿಸೆ ಗ್ರಾಮದಲ್ಲಿ ಪ್ರಾಯೋಗಿಕ ಆರಂಭವಾದ ಈ ಯೋಜನೆ ಇದೀಗ 10 ಗ್ರಾಮಗಳು ಮತ್ತು 4,802 ಕುಟುಂಬಗಳಿಗೆ ವಿಸ್ತರಿಸಿದೆ. ಕಳೆದ ಒಂದು ದಶಕದಲ್ಲಿ, ಇಕೋಗ್ರಾಮ್ 19,623 ಘನ ಮೀಟರ್‍ ಗಳಷ್ಟು ಭೂಕುಸಿತ ಸ್ಥಳವನ್ನು ಉಳಿಸಿದ್ದು, ಇದು ಸರಿಸುಮಾರು 16 ಎಕರೆ-ಅಡಿಗಳಿಗೆ ಸಮನಾಗಿದೆ ಎಂದು ಅವರು ಹೇಳಿದರು.

ಜೊತೆಗೆ, 1,524 ಮೆಟ್ರಿಕ್ ಟನ್‍ಗಳಷ್ಟು ಒಣ ತ್ಯಾಜ್ಯವನ್ನು ಮರುಬಳಕೆ ಮಾಡಲಾಗಿದೆ. ಕಾಗದದ ಮರುಬಳಕೆಯ ಮೂಲಕ 8,647 ಮರಗಳನ್ನು ಉಳಿಸಲಾಗಿದ್ದು, 3,343 ಎಂಡಬ್ಯುಎಚ್ ವಿದ್ಯುತ್‍ aನ್ನು ಸಂರಕ್ಷಿಸಲಾಗಿದೆ, 1,505 ಕೆಎಲ್ ಇಂಧನವನ್ನು ಉಳಿಸಲಾಗಿದೆ ಮತ್ತು 2026ರ ಆರ್ಥಿಕ ವರ್ಷದ ಅವಧಿಯಲ್ಲಿ 5,583 ಮೆಟ್ರಿಕ್ ಟನ್‍ಗಳಷ್ಟು ಇಂಗಾಲ ಡೈಆಕ್ಸೈಡ್ ಸಮಾನ ಹೊರಸೂಸುವಿಕೆಯನ್ನು ಕಡಿಮೆ ಮಾಡಲಾಗಿದೆ ಎಂದು ಮೈರಿಯಂ ಶಂಕರ್ ಮಾಹಿತಿ ನೀಡಿದರು.

ಎಂಬೆಸ್ಸಿ ಗ್ರೂಪ್‍ನ ಅಧ್ಯಕ್ಷ ಜಿತೇಂದ್ರ ವಿರ್ವಾಣಿ ಮಾತನಾಡಿ, ಇಕೋಗ್ರಾಮ್ ನಿಂದ ಕಲಿಯಬಹುದಾದ ಅತ್ಯಂತ ಪ್ರಮುಖ ಪಾಠವೆಂದರೆ, ದೀರ್ಘಕಾಲಿಕ ಪರಿಸರ ಬದಲಾವಣೆಯು ಸ್ಥಳೀಯ ಮಾಲಕತ್ವದಿಂದ ಆರಂಭವಾಗುತ್ತದೆ ಎಂಬುದು. ಕಳೆದ ಒಂದು ದಶಕದಲ್ಲಿ, ಬೆಟ್ಟಹಲಸೂರಿನ ಜನರು, ಪಂಚಾಯಿತಿ ಮತ್ತು ಯೋಜನೆಯ ಪಾಲುದಾರರು, ಸಮುದಾಯಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಒದಗಿಸಿದಾಗ ಪರಿಹಾರಗಳು ದೈನಂದಿನ ಜೀವನದ ಒಂದು ಭಾಗವಾಗಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಪತ್ನಿ ಮೀನಾಕ್ಷಿ ಶೇಷಾದ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬೆಟ್ಟಹಲಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಹೇಮಾವತಿ ನಾಗರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸ್ಥಳೀಯ ಪರಿಸರ ಉಪಕ್ರಮಗಳಿಗೆ ನೀಡಿದ ಕೊಡುಗೆಗಾಗಿ 30 ಗ್ರಾಮ ಪಂಚಾಯಿತಿ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು.

Tags

EcogramGram panchayatBettahalasuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X